ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ) 
ರಾಜ್ಯ

BBMP: ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ

ಒನ್ ಟೈಮ್ ಸೆಟಲ್​ಮೆಂಟ್​(OTS) ಯೋಜನೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಗಡುವು ಜುಲೈ 31ಕ್ಕೆ ಮುಕ್ತಾಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತೆರಿಗೆ ಸಂಗ್ರಹದಲ್ಲಿ 600 ಕೋಟಿ ರೂ. ಹೆಚ್ಚಳವಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 2023-24ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಒನ್ ಟೈಮ್ ಸೆಟಲ್​ಮೆಂಟ್​(OTS) ಯೋಜನೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಗಡುವು ಜುಲೈ 31ಕ್ಕೆ ಮುಕ್ತಾಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತೆರಿಗೆ ಸಂಗ್ರಹದಲ್ಲಿ 600 ಕೋಟಿ ರೂ. ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಪಾಲಿಕೆ ಕಂದಾಯ ಅಧಿಕಾರಿಗಳ ಪ್ರಕಾರ, ಒಟಿಎಸ್ ಯೋಜನೆಯಡಿ 1.14 ಲಕ್ಷ ಜನರಿಂದ 380.63 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. "ಕಳೆದ ವರ್ಷ ಇದೇ ಸಮಯದಲ್ಲಿ 2,457.30 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷ ಪಾಲಿಕೆಯು 3,065.82 ಕೋಟಿ ರೂ. ಸಂಗ್ರಹಿಸಿದೆ. ಪಾಲಿಕೆಯು ತೆರಿಗೆ ಬಾಕಿ ಉಳಿಸಿಕೊಂಡಿದ್ದ ಸುಮಾರು ನಾಲ್ಕು ಲಕ್ಷ ಜನರಿಗೆ ಒಟಿಎಸ್ ಯೋಜನೆಯನ್ನು ಘೋಷಿಸಿದ ನಂತರ ಆದಾಯ ಹೆಚ್ಚಾಗಿದೆ.

ವಿವಿಧ ಸ್ಲ್ಯಾಬ್‌ಗಳ ಅಡಿಯಲ್ಲಿ 16,904 ಆಸ್ತಿ ಮಾಲೀಕರು ಕಡಿಮೆ ತೆರಿಗೆ ಪಾವತಿಸುತ್ತಿದ್ದು, 6,723 ಆಸ್ತಿ ಮಾಲೀಕರಿಂದ 163.13 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ.

ಇನ್ನು ಮುಂದೆ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಬಿಎಂಪಿ ಕಾಯ್ದೆಯಡಿ ನೋಟಿಸ್ ಜಾರಿ ಮಾಡಲಾಗುವುದು. ತೆರಿಗೆ ಪಾವತಿಸದಿದ್ದರೆ ಅವರ ಚರ ಆಸ್ತಿಗಳನ್ನು ವಶಪಡಿಸಿಕೊಳ್ಳಬಹುದು ಎಂದು ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.

ಡಿಮ್ಯಾಂಡ್ ಡ್ರಾಫ್ಟ್‌ಗಳು ಮತ್ತು ಚೆಕ್‌ಗಳ ಮೂಲಕ ಪಾಲಿಕೆಯು ಸುಮಾರು 150 ಕೋಟಿ ರೂಪಾಯಿ ತೆರಿಗೆ ಪಡೆದಿದ್ದು, ಒಟ್ಟು 3,200 ಕೋಟಿ ತೆರಿಗೆ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆ ಮತ್ತು ಸಾಫ್ಟ್‌ವೇರ್ ಸಮಸ್ಯೆಗಳಿಂದ ಅನೇಕ ಡಿಫಾಲ್ಟರ್‌ಗಳು ತೆರಿಗೆ ಪಾವತಿಸಲು ಸಾಧ್ಯವಾಗದ ಕಾರಣ ಒಟಿಎಸ್ ಗಡುವು ವಿಸ್ತರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಗಿರಿನಾಥ್, ಇನ್ನೂ ಎಷ್ಟು ಮಂದಿ ಬಾಕಿ ಉಳಿಸಿಕೊಂಡಿದ್ದಾರೆ ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಬೇಡಿಕೆಗಳನ್ನು ಪರಿಶೀಲಿಸಿ ಪಾಲಿಕೆಯು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT