ಡಾ ಜಿ ಪರಮೇಶ್ವರ್  
ರಾಜ್ಯ

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧಾರ: ಡಾ ಜಿ ಪರಮೇಶ್ವರ್

ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬರುತ್ತಿರುವ ಮುಡಾ ಹಗರಣದ ಸಂಬಂಧ ಹೋರಾಟವನ್ನು ಮತ್ತಷ್ಟು ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಳೆ ಹಮ್ಮಿಕೊಳ್ಳಲು ಉದ್ದೇಶಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಶುಕ್ರವಾರ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.

ಇದುವರೆಗೆ ಸರ್ಕಾರ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿಕೊಂಡು ಬರುತ್ತಿತ್ತು. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವರೇ ಹೇಳಿದ್ದರು.

ಇಂದು ಬೆಳಗ್ಗೆಯಷ್ಟೇ ಮಾತನಾಡಿದ್ದ ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಕೂಡ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅನುಮತಿ ನೀಡುವುದಿಲ್ಲ ಎಂದೇ ಹೇಳಿದ್ದರು.

ರಾಜ್ಯಪಾಲರಿಂದ ನೋಟಿಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆತುರಾತುರವಾಗಿ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ, ಬಹುಶಃ ಅವರು ಒತ್ತಡದಲ್ಲಿ ನೊಟೀಸ್ ಕೊಟ್ಟಿದ್ದಾರೆ ಎನಿಸುತ್ತದೆ ಎಂದು ಡಾ. ಜಿ ಪರಮೇಶ್ವರ್​ ಹೇಳಿದರು. ಕಳೆದ ರಾತ್ರಿ ಸಂಪುಟ ನಿರ್ಣಯ ಕಳಿಸಲು ತೀರ್ಮಾನಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ, ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಅನ್ನುವ ಅನುಮಾನ ಇದೆ. ದೂರು ಪಡೆದ ದಿನವೇ ರಾಜ್ಯಪಾಲರು ನೋಟಿಸ್​ ಕೊಟ್ಟಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಜುಲೈ 26ರಂದೇ ರಾಜ್ಯಪಾಲರಿಗೆ ಅಬ್ರಹಾಂ ಮನವಿ ಕೊಟ್ಟಿದ್ದು. ರಾಜ್ಯಪಾಲರ ಪ್ರಶ್ನೆಗಳಿಗೆ ಲಿಖಿತ ರೂಪದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಉತ್ತರ ನೀಡಿದ್ದಾರೆ. ಇದಾದ ನಂತರ ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಬಂದಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವುದಿಲ್ಲವೆಂಬ ವಿಶ್ವಾಸವಿದೆ. ಒಂದು ವೇಳೆ ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸುತ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡರೂ ನಾವು ಎದುರಿಸುತ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್