ಬಿಜೆಪಿ ಮತ್ತು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ) 
ರಾಜ್ಯ

ಮುಡಾ ಅಕ್ರಮ ಗದ್ದಲ: ಇಂದು ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆ ಆರಂಭ

ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಇಂದು ಬಿಜೆಪಿ ಮತ್ತು ಜೆಡಿಎಸ್ ​ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MUDA) ನೀವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇಷ್ಟು ದಿನ ಆಗ್ರಹಿಸುತ್ತಲೇ ಬಂದಿದ್ದು ವಿಪಕ್ಷಗಳು ತಮ್ಮ ಪ್ರತಿಭಟನೆ, ಹೋರಾಟವನ್ನು ಪಾದಯಾತ್ರೆ ಮೂಲಕ ಇಂದು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ.

ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಇಂದು ಬಿಜೆಪಿ ಮತ್ತು ಜೆಡಿಎಸ್ ​ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.

ಇಂದು ಶನಿವಾರ ಆಗಸ್ಟ 3 ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್​ನಲ್ಲಿ ಪಾದಯಾತ್ರೆ ಉದ್ಘಾಟನೆ ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್‌ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಭಾಗಿಯಾಗಲಿದ್ದಾರೆ.

ಬಳಿಕ ಇಂದು 10 ಗಂಟೆ ಸುಮಾರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಪಾದಯಾತ್ರೆ ಆರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ವಿಜಯೇಂದ್ರ ಭೇಟಿ: ಮೈಸೂರು ಚಲೋ ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಮಾಡಿ ಪೂಜೆ ಸಲ್ಲಿಸಿ ಬಳಿಕ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT