ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು 
ರಾಜ್ಯ

ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ, PSI ಸಾವು ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಆರ್.ಅಶೋಕ್

'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಅಧಿಕಾರಿಗಳ ಸಾವಾಗುತ್ತಿದೆ. ಮಹರ್ಷಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ನಂತರ ಈಗ ಪಿಎಸ್ ಐ ಪರಶುರಾಮ್ ಸಾವಾಗಿದೆ'

ಯಾದಗಿರಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ ಐ ಪರುಶುರಾಮ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲೆಯ ಸೋಮನಾಳ ಗ್ರಾಮದಲ್ಲಿ ಭಾನುವಾರ ಪರಶುರಾಮ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಅಧಿಕಾರಿಗಳ ಸಾವಾಗುತ್ತಿದೆ. ಮಹರ್ಷಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ನಂತರ ಈಗ ಪಿಎಸ್ ಐ ಪರಶುರಾಮ್ ಸಾವಾಗಿದೆ. ನಮ್ಮ ಕ್ಷೇತ್ರದಲ್ಲಿ ದಲಿತರು ಇರಬಾರದು ಎಂದು ಯಾದಗಿರಿ ಶಾಸಕರು ಹೇಳಿದ್ದಾರೆಂದು ಪರಶುರಾಮ್ ಕುಟುಂಬದವರು ಆರೋಪಿಸಿದ್ದಾರೆ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿಯೇ ನಾವೆಲ್ಲರೂ ಬದುಕುತ್ತಿದ್ದರೂ ಈ ರೀತಿಯ ಹೇಯ ಕೃತ್ಯ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿಗಳನ್ನು ಎರಡು ವರ್ಷದ ಒಳಗೆ ವರ್ಗಾವಣೆ ಮಾಡಬಾರದು ಎಂಬ ಕಾನೂನನ್ನು ಕಾಂಗ್ರೆಸ್ ಪಕ್ಷದವರು ಒಂದು ವರ್ಷಕ್ಕೆ ಇಳಿಸಿದ್ದಾರೆ. ಠಾಣೆಗೆ ಬಂದು ಏಳು ತಿಂಗಳಾಗುವಷ್ಟರಲ್ಲಿ ಪರಶುರಾಮ್ ಅವರನ್ನು ವರ್ಗಾವಣೆ ಮಾಡಿದ್ದು ಯಾಕೆ? ಎಂದು ಪ್ರಶ್ನಿಸಿದ ಅವರು ವರ್ಗಾವಣೆ ಮಾಡಿದ ಅಧಿಕಾರಿ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪರಶುರಾಮ್ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿ ಕಣ್ಣೊರೆಸುವ ತಂತ್ರವಾಡುತ್ತಿದೆ. ಸಿಐಡಿ ತನಿಖೆ ಮೇಲೆ ನಂಬಿಕೆ ಇಲ್ಲ. ಸಿಬಿಐ ತನಿಖೆಗೆ ವಹಿಸಬೇಕು, ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿರುವ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಬಂಧಿಸಬೇಕು, ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್