ಮಹಿಳೆಗೆ ಕಾಮುಕನ ಕಿರುಕುಳ 
ರಾಜ್ಯ

Woman Molested in Bengaluru: ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ, Video Viral!

ಬೆಂಗಳೂರಿನ ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಆಕೆ ಬಳಿ ಬಂದು ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಮುತ್ತಿಟ್ಟಿದ್ದಾನೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ವರದಿಯಾಗಿದ್ದು ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಬಲವಂತವಾಗಿ ತಬ್ಬಿ ಮುತ್ತಿಟ್ಟು, ಅಶ್ಲೀಲವಾಗಿ ವರ್ತಿಸಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಹೌದು.. ಬೆಂಗಳೂರಿನಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಚಿನ್ನದ ಸರ, ಮೊಬೈಲ್, ಪರ್ಸ್ ಕಳ್ಳತನದಂತಹ ಪ್ರಕರಣಗಳು ನಿತ್ಯ ವರದಿಯಾಗುತ್ತಿದ್ದು, ಇದರ ಜೊತೆಗೇ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳೂ ಕೂಡ ರಾಜಧಾನಿಯ ಹೆಸರಿಗೆ ಕಪ್ಪುಚುಕ್ಕೆಯಾಗುತ್ತಿದೆ.

ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಬೆಂಗಳೂರಿನಲ್ಲಿ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಆಕೆ ಬಳಿ ಬಂದು ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಮುತ್ತಿಟ್ಟಿದ್ದಾನೆ.

ಈ ವೇಳೆ ಮಹಿಳೆ ಆತನಿಂದ ತಪ್ಪಿಸಿಕೊಂಡು ಮುಂದೆ ಹೋಗಿದ್ದು, ಮತ್ತೆ ಆಕೆಯನ್ನು ಹಿಂಬಾಲಿಸಿದ ಆತ ಮತ್ತೆ ಆಕೆಯನ್ನು ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕೂಡಲೇ ಆತ ಆಕೆಯನ್ನು ಬಿಟ್ಟು ಓಡಿ ಹೋಗಿದ್ದಾನೆ. ಇವಿಷ್ಟೂ ಘಟನೆ ಮನೆಯೊಂದಕ್ಕೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬೆಚ್ಚಿಬಿದ್ದ ಮಹಿಳೆ

ಇನ್ನು ಮನೆ ಮುಂದೆ ಸೇಫ್ ಎಂದು ವಾಕಿಂಗ್ ಮಾಡುತ್ತಿದ್ದ ಮಹಿಳೆ ಈ ಘಟನೆ ಬಳಿಕ ತೀವ್ರ ಆತಂಕಗೊಂಡಿದ್ದಾರೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು. ಇದೇ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!