ಲಕ್ಷ್ಮೀ ಹೆಬ್ಬಾಳ್ಕರ್ 
ರಾಜ್ಯ

ತಾಂತ್ರಿಕ ದೋಷ ಸರಿಪಡಿಸಲಾಗಿದೆ; ಇಂದಿನಿಂದ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮಿ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ರೂ.2000 ನೀಡುವ ಯೋಜನೆಯಾಗಿದೆ.

ಮಂಡ್ಯ: ಗೃಹ ಲಕ್ಷ್ಮಿ ಖಾತರಿ ಯೋಜನೆಯ ಫಲಾನುಭವಿಗಳು ಮಂಗಳವಾರದಿಂದ ಹಣವನ್ನು ಪಡೆಯಲು ಪ್ರಾರಂಭಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ರೂ.2000 ನೀಡುವ ಯೋಜನೆಯಾಗಿದೆ.

ಕಳೆದ ವರ್ಷದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನ ಪ್ರಮುಖ ಭರವಸೆಗಳಲ್ಲಿ ಒಂದಾಗಿದ್ದ ಗ್ಯಾರಂಟಿಯನ್ನು ಆಗಸ್ಟ್ 30, 2023 ರಂದು ಮೈಸೂರಿನಲ್ಲಿ ಪ್ರಾರಂಭಿಸಲಾಯಿತು.

ಮುಡಾ ಅವ್ಯವಹಾರದ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮಾಡುತ್ತಿರುವ ಮೈಸೂರು ಚಲೋ ಪಾದಯಾತ್ರೆ ವಿರುದ್ಧ ನಡೆದ ಕಾಂಗ್ರೆಸ್ ಜನಾಂದೋಲನ ಸಭೆ ವೇಳೆ ಮಂಡ್ಯದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಹೆಬ್ಬಾಳ್ಕರ್, ಕಳೆದ ಎರಡು ತಿಂಗಳಿಂದ ಹಣ ಸಿಗುತ್ತಿಲ್ಲ ಎಂದು ಕೆಲವು ಮಹಿಳೆಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

"ಕೆಲವು ತಾಂತ್ರಿಕ ದೋಷದಿಂದ, ಜೂನ್ ಮತ್ತು ಜುಲೈ ತಿಂಗಳ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ನಮಗೆ ಸಾಧ್ಯವಾಗಲಿಲ್ಲ, ಇಂದಿನಿಂದ ಇದು ಮತ್ತೆ ಪ್ರಾರಂಭವಾಗುತ್ತದೆ, ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ" ಎಂದು ಹೆಬ್ಬಾಳ್ಕರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಸೌದಿ ಮಿಲಿಟರಿ ಕಾರ್ಯಾಚರಣೆಗೆ ಹೌತಿ ಬಂಡುಕೋರರ ತಿರುಗೇಟು: ರಿಯಾದ್ ವಿಮಾನ ನಿಲ್ದಾಣ, ಅರಾಮ್ಕೊ ಸಂಸ್ಕರಣಾಗಾರ ಗುರಿಯಾಗಿಸಿಕೊಂಡು ದಾಳಿ!

ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!

ಬೆಂಗಳೂರಿನಲ್ಲಿ ವರುಣ ಆರ್ಭಟ: 17.3 ಮಿ.ಮೀ. ಮಳೆಗೆ ಬೆಂಗಳೂರು ತತ್ತರ; ಹಲವೆಡೆ ಜಲಾವೃತ, ಮರಗಳು ಧರೆಗೆ..!

ಸರ್ಕಾರದ ಬೊಕ್ಕಸಕ್ಕೆ ಕಿಕ್ ಕೊಟ್ಟ ಮದ್ಯ ಪ್ರಿಯರು: ಮಾರಾಟ ಶೇ.41ರಷ್ಟು ಹೆಚ್ಚಳ, ಅಬಕಾರಿ ಆದಾಯ ಭಾರೀ ಏರಿಕೆ..!