ಶಿರೂರು ಗುಡ್ಡ ಕುಸಿತ 
ರಾಜ್ಯ

ಶಿರೂರು ಗುಡ್ಡ ಕುಸಿತ ಪ್ರಕರಣ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕ ಅರ್ಜುನ್ ಎಂಬ ಶಂಕೆ

ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದು, ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವಲ್ಲೇ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.

ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ.

ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಜುಲೈ 16 ರಂದು ಸಂಭಿವಿಸಿದ್ದ ಗುಡ್ಡ ಭೂಕುಸಿತದಲ್ಲಿ ಕೇರಳದ ಕೋಝಿಕ್ಕೋಡ್ ಮೂಲದ ಲಾರಿ ಚಾಲಕ ಅರ್ಜುನ್ ನಾಪತ್ತೆಯಾಗಿದ್ದಾರೆ. ಅರ್ಜುನ್​ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಮೇರೆಗೆ ಹುಡುಕಾಟ ನಡೆಸಲಾಗಿತ್ತು. ಸತತ 13 ದಿನಗಳ ಕಾಲ ಹುಡುಕಾಟ ನಡೆಸಿದರೂ ಅರ್ಜುನ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಭೂಕುಸಿತದಿಂದ ನದಿಯಲ್ಲಿ ಶೇಖರಣೆಯಾದ ಮಣ್ಣಿನಡಿ ಹೂತು ಹೋಗಿದ್ದ ಲಾರಿಯೊಳಗೆ ಅರ್ಜುನ್ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಏತನ್ಮಧ್ಯೆ, ವಿವಿಧ ಸಾಧನಗಳನ್ನು ಬಳಸಿ ಶೋಧ ನಡೆಸಿದಾಗ ನದಿಪಾತ್ರದಲ್ಲಿ ಯಾವುದೇ ದೇಹ ಪತ್ತೆಯಾಗಿಲ್ಲ. ಗಂಗಾವಳಿ ನದಿಯಲ್ಲಿ ಹೆಚ್ಚಿನ ನೀರಿನ ಪ್ರವಾಹ ಮತ್ತು ನದಿಯ ಆಳವು ರಕ್ಷಣಾ ತಂಡಗಳಿಗೆ ಪ್ರಮುಖ ಸವಾಲಾಗಿದೆ.

ಶಿರೂರಿನ ಹೊನ್ನಾವರ ಬೀಚ್ ಬಳಿ ಸಮುದ್ರದಲ್ಲಿ ಶವ ತೇಲುತ್ತಿರುವುದು ಪತ್ತೆಯಾಗಿತ್ತು. ಇದನ್ನು ಗಮನಿಸಿದ ಮೀನುಗಾರರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಕೆಲವು ದಿನಗಳ ಹಿಂದೆ ಸಮುದ್ರದಲ್ಲಿ ನಾಪತ್ತೆಯಾಗಿದ್ದ ವಲಸೆ ಕಾರ್ಮಿಕರ ಶವವೂ ಆಗಿರಬಹುದು ಎಂದು ಕರಾವಳಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT