ಹೈಕೋರ್ಟ್  
ರಾಜ್ಯ

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: PIL ವಜಾ

ಕರ್ನಾಟಕ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಗಳಲ್ಲಿ ಮೀಸಲು ಕಲ್ಪಿಸಿದ ವಿಧೇಯಕ ಕುರಿತು 2024ರ ಜು.11ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಮೀಸಲು ಕಲ್ಪಿಸುವ ಉದ್ದೇಶಿತ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ನಗರದ ಬಿಳೇಕಹಳ್ಳಿಯ ಲೆಕ್ಕ ಪರಿಶೋಧಕಿ ಡಾ.ಆರ್‌. ಅಮೃತಲಕ್ಷ್ಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ.

ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಮಾದರಿಯ ಕಾನೂನನ್ನು ಹರಿಯಾಣ ಸರ್ಕಾರ ರಚನೆ ಮಾಡಿದೆ, ಪಂಜಾಬ್-ಹರ್ಯಾಣ ಹೈಕೋರ್ಟ್ ಈ ಕಾನೂನು ರದ್ದುಪಡಿಸಿತ್ತು ಎಂದರು.

ನ್ಯಾಯಪೀಠ ಅರ್ಜಿಯನ್ನು ಪರಿಶೀಲನೆ ಮಾಡಿ ಹರಿಯಾಣ ಸರ್ಕಾರ ರಾಜ್ಯದ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಮೀಸಲಾತಿ ಕಲ್ಪಿಸಿ ಕಾಯ್ದೆಯನ್ನು ರೂಪಿಸಿತ್ತು. ಕರ್ನಾಟಕದಲ್ಲಿ ವಿಧೇಯಕ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿಲ್ಲ. ಸದ್ಯ ಕರಡು ಸ್ವರೂಪದಲ್ಲಿದ್ದು, ಕಾನೂನು ಮಾನ್ಯತೆ ಪಡೆದಿಲ್ಲ ಎಂದು ಹೇಳಿತು. ಬಳಿಕ ಅರ್ಜಿಯನ್ನು ವಜಾಗೊಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!