ಹೈಕೋರ್ಟ್ 
ರಾಜ್ಯ

ಬಸವನಗುಡಿ ವಾರ್ಡ್ ಮರುನಾಮಕರಣದ ವಿರುದ್ಧ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬಸವನಗುಡಿ ವಾರ್ಡ್ ಮರುನಾಮಕರಣದ ವಿರುದ್ಧ ಸತ್ಯಲಕ್ಷ್ಮಿ ರಾವ್ ಮತ್ತು ಇತರರು PIL ಸಲ್ಲಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಬಸವನಗುಡಿ ವಾರ್ಡ್‌ಗೆ ದೊಡ್ಡ ಗಣಪತಿ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಬಸವನಗುಡಿ ವಾರ್ಡ್ ಮರುನಾಮಕರಣದ ವಿರುದ್ಧ ಸತ್ಯಲಕ್ಷ್ಮಿ ರಾವ್ ಮತ್ತು ಇತರರು PIL ಸಲ್ಲಿಸಿದ್ದು, ಮೂಲ ಹೆಸರು ಗಮನಾರ್ಹ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವನ್ನು ಹೊಂದಿದೆ ಎಂದು ವಾದಿಸಿದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ''ವಾರ್ಡ್ ಅಥವಾ ನಗರವನ್ನು ಮರುನಾಮಕರಣ ಮಾಡುವ ವಿಷಯವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದ ವಿಷಯವಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ಬಸವನಗುಡಿ ವಾರ್ಡ್ ಮರುನಾಮಕರಣ ಮಾಡಿ 2023ರ ಸೆಪ್ಟೆಂಬರ್ 25ರಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿದ್ದ ಅಧಿಸೂಚನೆಯನ್ನು ನ್ಯಾಯಾಲಯ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.

ವಾರ್ಡ್ ಗಡಿಗಳನ್ನು ಮರುವಿನ್ಯಾಸಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ಈಗಾಗಲೇ ಬೆಂಗಳೂರಿನ ಹಲವಾರು ವಾರ್ಡ್‌ಗಳಿಗೆ ಮರುನಾಮಕರಣ ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್