ಸಂಗ್ರಹ ಚಿತ್ರ 
ರಾಜ್ಯ

ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಸ್ಯೋದ್ಯಾನ ಲಾಲ್ ಬಾಗ್ ನಲ್ಲಿ ಪ್ರತೀ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.

ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಪಾರ್ಕಿಂಗ್ ಸ್ಥಳಗಳು ಇಂತಿವೆ...

  • ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ಬೈಕ್ ಪಾರ್ಕಿಂಗ್​​

  • ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ವ್ಯವಸ್ಥೆ

  • ಮರಿಗೌಡ ರಸ್ತೆಯ ಹಾಪ್ ಕಾಮ್ಸ್​​ನಲ್ಲಿ ಬೈಕ್ ಹಾಗೂ ಕಾರು ನಿಲುಗಡೆ

  • ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ಕಾರು ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಪಾರ್ಕಿಂಗ್ ನಿಷೇಧ

  • ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್​ವರೆಗೆ ರಸ್ತೆಯ ಎರಡು ಬದಿ

  • ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್​ವರೆಗೆ ರಸ್ತೆಯ ಎರಡು ಬದಿ

  • ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಭಾಗ್ ಮುಖ್ಯದ್ವಾರದ ವರೆಗೆ

  • ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್​ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್​ವರೆಗೆ

  • ಬಿಟಿಎಸ್ ಬಸ್ ನಿಲ್ದಾಣ, ಬಿಎಂಟಿಸಿ ಜಂಕ್ಷನ್​ನಿಂದ ರಸ್ತೆಯ ಎರಡು ಬದಿಗಳಲ್ಲಿ

  • ಕೃಂಬಿಗಲ್ ರಸ್ತೆಯ ಎರಡು ಕಡೆಗಳಲ್ಲಿ

  • ಲಾಲ್‌ಬಾಗ್ ವೆಸ್ಟ್ಗೇಟ್‌ನಿಂದ ಆರ್.ವಿ. ಟೀರ್ಸ್​ ಕಾಲೇಜ್‌ವರೆಗೆ

  • ಆರ್‌ವಿ ಟೀರ್ಸ್​ ಕಾಲೇಜ್‌ನಿಂದ ಅಶೋಕ ಪಿಲ್ಲರ್​ವರೆಗೆ

  • ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ

ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವವರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಮೆಟ್ರೋ, ಬಿಎಂಟಿಸಿ, ಇತ್ಯಾದಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವಂತೆಯೂ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT