ಸಂಗ್ರಹ ಚಿತ್ರ 
ರಾಜ್ಯ

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಸಾಧ್ಯತೆ, ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ

ಸಚಿವರು ಸಲಹೆಯನ್ನು ನೀಡಿದಾಗ ರಾಜ್ಯಪಾಲರು ಇದಕ್ಕೆ ಅನುಗುಣವಾಗಿರುತ್ತಾರೆ ಎಂಬ ಭರವಸೆ ನನಗಿದೆ. ಏಕೆಂದರೆ ರಾಜಭವನ ರಾಜಕೀಯ ಆಟವಾಡುವ ಸ್ಥಳವಲ್ಲ. ಆದರೆ, ಬಿಜೆಪಿ ಆ ಪ್ರಯತ್ನವನ್ನು ಮಾಡುತ್ತಿದೆ.

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ಅನುಮತಿ ಕೋರಿ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ಊಹಾಪೋಹಗಳು ಶುರುವಾಗಿವೆ.

ಜುಲೈ 26ರಂದು ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ಆಗಸ್ಟ್ 1 ರಂದು, ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ ಸಂಪುಟವು ನೋಟಿಸ್‌ ವಾಪಸ್‌ ಪಡೆಯಲು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿತು. ಅಲ್ಲದೆ, ಅರ್ಜಿಯನ್ನು ತಿರಸ್ಕರಿಸುವಂತೆಯೂ ಆಗ್ರಹಿಸಿತ್ತು.

ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆಯೇ ಅಥವಾ ಪ್ರಕರಣವನ್ನು ಸಿಬಿಐಗೆ ವಹಿಸುತ್ತಾರೆಯೇ ಎಂಬುದರ ಕುರಿತು ಕುತೂಹಲಗಳು ಮೂಡಿವೆ.

ಈ ನಡುವೆ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಯಾವುದೇ ಘರ್ಷಣೆಯಾಗದಂತೆ ನೋಡಿಕೊಳ್ಳಲು ರಾಜ್ಯಪಾಲ ಗೆಹ್ಲೋಟ್ ಅವರು ಕಾನೂನು ಸಲಹೆಗಾರರ ​​ಅಭಿಪ್ರಾಯವನ್ನೂ ತೆಗೆದುಕೊಂಡಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಸಚಿವರು ಸಲಹೆಯನ್ನು ನೀಡಿದಾಗ ರಾಜ್ಯಪಾಲರು ಇದಕ್ಕೆ ಅನುಗುಣವಾಗಿರುತ್ತಾರೆ ಎಂಬ ಭರವಸೆ ನನಗಿದೆ. ಏಕೆಂದರೆ ರಾಜಭವನ ರಾಜಕೀಯ ಆಟವಾಡುವ ಸ್ಥಳವಲ್ಲ. ಆದರೆ, ಬಿಜೆಪಿ ಆ ಪ್ರಯತ್ನವನ್ನು ಮಾಡುತ್ತಿದೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ. 163ನೇ ವಿಧಿಯೂ ರಾಜ್ಯಪಾಲರು ತಮ್ಮ ವಿವೇಚನೆಯನ್ನು ಬಳಸಬಹುದು ಎಂದು ಹೇಳುತ್ತದೆ. ಆದರೆ, ಅದನ್ನು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಬಳಸುವಂತಿಲ್ಲ. ರಾಜ್ಯಪಾಲರು ಮಂತ್ರಿಮಂಡಲದ ನೆರವು ಮತ್ತು ಸಲಹೆಯನ್ನು ಮೀರಿ ಹೋಗಬಾರದು ಎಂದು ತಿಳಿಸಿದ್ದಾರೆ.

ಶೋಕಾಸ್ ನೋಟಿಸ್ ನೀಡದೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗಿತ್ತು. ಆದರೆ, ಅವರು ನೋಟಿಸ್ ನೀಡಿರುವುದು ಮುಖ್ಯಮಂತ್ರಿಗಳಿಗೆ ವರವಾಗಿ ಪರಿಣಮಿಸಿದೆ. ಈ ನಡುವೆ ಪ್ರಕರಣವನ್ನು ಸಿಬಿಐಗೆ ವಹಿಸುವ ಆಲೋಚನೆ ಕೂಡ ರಾಜ್ಯಪಾಲರಿಗೆ ಇರಬಹುದು ಎಂದು ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಜುಲೈ 25ರಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಿಯೋಗ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆೆ ಒತ್ತಾಯಿಸಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ವಿಚಾರವಾಗಿ ನಗರಾಭಿವೃದ್ಧಿ ಇಲಾಖೆಗೆಗೆ ಕಳೆದ ಒಂದು ವರ್ಷದಿಂದ 15 ಪತ್ರಗಳನ್ನು ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು 50- 50 ಅನುಪಾತವನ್ನು ರದ್ದು ಪಡಿಸಿ ಸೂಕ್ತ ಕ್ರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಜೊತೆಗೆ ತನಿಖಾ ಸಮಿತಿ ರಚಿಸಿ ಮುಡಾ ಆಯಕ್ತರ ವಿಚಾರಣೆ ಮಾಡುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಯಾವುದೇ ಒಂದು ಬಡಾವಣೆ ನಿರ್ಮಾಣ ಮಾಡುವಾಗ ನಗರಾಭಿವೃದ್ಧಿ ಪ್ರಾಧಿಕಾರಿಗಳು ರೈತರನ್ನು ಒಪ್ಪಿಸಿ ಭೂಸ್ವಾಧೀನ ಮಾಡಬೇಕಾಗುತ್ತದೆ. ಹೀಗೆ ಮಾಡುವ ಸಂದರ್ಭದಲ್ಲಿ ರೈತರಿಗೆ ಪರಿಹಾರ ರೂಪದಲ್ಲಿ ಭೂಮಿಯ ಮೌಲ್ಯದಷ್ಟೇ ಹಣವನ್ನು ಅಥವಾ ಲೇಔಟ್ ಮಾಡುವಾಗ ಶೇ 50ರಷ್ಟು ನಿವೇಶನಗಳನ್ನು ನೀಡಬೇಕೆಂಬ ಒಪ್ಪಂದವಾಗುತ್ತದೆ. ಇವೆರಡೂ ಅಲ್ಲದಿದ್ದರೆ ವಶಪಡಿಸಿಕೊಂಡ ಭೂಮಿಯ ಮೌಲ್ಯದಷ್ಟೇ ಭೂಮಿಯನ್ನು ಇನ್ನೊಂದು ಕಡೆ ಗುರುತು ಮಾಡಿ ನೀಡುವುದು ಪ್ರಾಧಿಕಾರದ ಹೊಣೆಗಾರಿಕೆಯಾಗಿರುತ್ತದೆ.ಆದರೆ ಮೈಸೂರಿನಲ್ಲಿ ನಿರ್ಮಿಸಲ್ಪಟ್ಟ ಬಡಾವಣೆಗಳಲ್ಲಿ ಆ ರೀತಿ ಯಾವುದೇ ಮಾನದಂಡವನ್ನು ಅನುಸರಿಸಲಾಗಿಲ್ಲ ಎಂಬುದು ಈಗ ಕೇಳಿ ಬಂದಿರುವ ಆರೋಪವಾಗಿದೆ.

ಹಲವಾರು ಪ್ರಕಣದಲ್ಲಿ ಭೂ ಮಾಲೀಕರಿಗೆ ಪರಿಹಾರ ನೀಡಿಲ್ಲ. ಶೇಕಡಾ 50ರಷ್ಟು ನಿವೇಶನಗಳನ್ನೂ ನೀಡಿಲ್ಲ, ಬೇರೆಡೆ ಭೂಮಿಯನ್ನೂ ನಿಗದಿಪಡಿಸಿಲ್ಲ. ಅದಕ್ಕೆ ಬದಲಾಗಿ ಅರ್ಜಿಗಳಲ್ಲಿನ ಹಿರಿತನ ಪರಿಗಣಿಸದೆ ಅಕ್ರಮವಾಗಿ ಸೈಟ್ ಗಳನ್ನು ನೀಡಲಾಗಿದೆ ಎಂಬುದು ಕೇಳಿ ಬಂದಿರುವ ಆರೋಪವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT