ಸಂಗ್ರಹ ಚಿತ್ರ 
ರಾಜ್ಯ

ಖತರ್ನಾಕ್ ವಾಹನ ಕಳ್ಳರ ಸೆರೆ: 20 ಲಕ್ಷ ರೂ. ಮೌಲ್ಯದ 32 ವಾಹನ ವಶಕ್ಕೆ

ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ.

ಬೆಂಗಳೂರು: 2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ,

ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು.

ಈತ ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು ಮಾಹಿತಿ ನೀಡಿದ್ದ.

ಕೊಡಿಮಂಚೇನಹಳ್ಳಿ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಬೈಕ್‌ಗಳನ್ನು ಬಚ್ಚಿಟ್ಟಿರುವುದಾಗಿ ಹೇಳಿದ್ದ. ಇದರಂತೆ ಪೊಲೀಸರು .9 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ವಿರುದ್ಧ ಬೆಂಗಳೂರು ಮತ್ತು ತುಮಕೂರಿನಲ್ಲಿ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ.

ಮತ್ತೊಂದು ಘಟನೆಯಲ್ಲಿ ಬೈಕ್ ಮತ್ತು ಆಟೋ ರಿಕ್ಷಾಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ 38 ವರ್ಷದ ಮೆಕ್ಯಾನಿಕ್ ನನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.

ಈತನಿಂದ 17.50 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನಗಳು ಮತ್ತು ಎರಡು ಆಟೋ ರಿಕ್ಷಾಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನರಸಾಪುರ ಲೇಔಟ್ ನಿವಾಸಿ ಸೈಯದ್ ಇರ್ಫಾನ್ ಎಂದು ಗುರುತಿಸಲಾಗಿದೆ.

ಇರ್ಫಾನ್ ಮನೆಗಳ ಹೊರಗೆ ನಿಲ್ಲಿಸಿದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್‌ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT