ಜಿ. ಪರಮೇಶ್ವರ್ PTI
ರಾಜ್ಯ

ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ: ಕೋರ್ಟ್ ತಡೆಯಾಜ್ಞೆ ತೆರವಿಗೆ ಅಡ್ವೊಕೇಟ್ ಜನರಲ್‌ಗೆ ಸೂಚನೆ - ಪರಮೇಶ್ವರ್

ಬಿ ಎಸ್ ಯಡಿಯೂರಪ್ಪ ವಿರುದ್ಧದ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ (Pocso) ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಅಡ್ವೊಕೇಟ್ ಜನರಲ್ ಗೆ ಸೂಚಿಸಲಾಗಿದೆ.

ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧದ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ (Pocso) ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಅಡ್ವೊಕೇಟ್ ಜನರಲ್ ಗೆ ಸೂಚಿಸಲಾಗಿದೆ. ಆ ಪ್ರಕ್ರಿಯೆ ಮುಗಿದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆಗೆ (CID) ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಈ ಹಿಂದೆ ಮಧ್ಯಂತರ ಆದೇಶ ನೀಡಿತ್ತು.

ಫೆಬ್ರವರಿ 2ರಂದು ಇಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮಾರ್ಚ್ 14 ರಂದು ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಸಿಐಡಿ ಜೂನ್ 27ರಂದು ಯಡಿಯೂರಪ್ಪ ವಿರುದ್ಧ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಯಡಿಯೂರಪ್ಪ ಸೇರಿದಂತೆ ವಿಪಕ್ಷ ನಾಯಕರು ಭಾಗಿಯಾಗಿರುವ ಹಗರಣಗಳು ಅಥವಾ ಪ್ರಕರಣಗಳನ್ನು ಬಯಲಿಗೆಳೆದು ತನಿಖಾ ವರದಿಗಳ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಹೇಳಿದ್ದರು.

ಯಡಿಯೂರಪ್ಪ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣದಲ್ಲಿ ಆರೋಪಿಯಾಗಿರುವುದರಿಂದ ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ 81ರ ಹರೆಯದ ಮಾಜಿ ಮುಖ್ಯಮಂತ್ರಿ ಪ್ರಕರಣದ ಕುರಿತು ನ್ಯಾಯಾಲಯ ತೀರ್ಪು ನೀಡಿದಾಗ ಸತ್ಯ ಹೊರಬರಲಿದ್ದು ಮುಖ್ಯಮಂತ್ರಿಗೆ ತಕ್ಕ ಉತ್ತರ ಸಿಗಲಿದೆ ಎಂದು ಹೇಳಿದ್ದರು.

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಕುರಿತು ಕೇಳಿದ ಪ್ರಶ್ನೆಗೆ, ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT