ಸಕಲೇಶಪುರ ಮತ್ತು ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಕಾಮಗಾರಿ ಪ್ರಗತಿಯಲ್ಲಿದೆ 
ರಾಜ್ಯ

ಸಕಲೇಶಪುರದಲ್ಲಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್​ ಮಾಡಲಾಗಿದೆ.

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ ರಾತ್ರಿ ಹೊರಟಿದ್ದ ಈ ಎರಡು ರೈಲುಗಳು ಹಾಸನ ಹಾಗೂ ಆಲೂರು ನಿಲ್ದಾಣದಲ್ಲಿ ಸ್ಥಗಿತವಾಗಿದೆ. ವೀಕೆಂಡ್‌ನಲ್ಲಿ ಊರಿಗೆ ಹೊರಟಿದ್ದ ಪ್ರಯಾಣಿಕರಿಗೆ ಭೂಕುಸಿತದಿಂದ ಆತಂಕ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್​​ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ. ರೈಲ್ವೆ ವಲಯವು ಸದ್ಯದ ಮಟ್ಟಿಗೆ ಪಡೀಲ್-ಹಾಸನ ಜಂಕ್ಷನ್‌ ನಡುವಿನ ರೈಲುಗಳ ಓಡಾಟವನ್ನು ಸ್ಥಗಿತಗೊಳಿಸಿದೆ. ಈ ನಡುವೆ ಭೂಕುಸಿತವಾದ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಮುಂದುವರೆದಿದ್ದು ಕೆಲವೇ ಹೊತ್ತಿನಲ್ಲಿ ರೈಲಿನ ಓಡಾಟ ಆರಂಭಗೊಳಿಸಲಾಗುವುದು ಎಂದು ಡಿಆರ್‌ಎಂ ಮೈಸೂರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ.

ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್​ ಮಾಡಲಾಗಿದೆ. ಆಲೂರು-ಹಾಸನ ಮಾರ್ಗದ ರೈಲು ಸಂಚಾರವೂ ಸ್ಥಗಿತಗೊಂಡಿದೆ. ಸಕಲೇಶಪುರ, ಯಡಕುಮಾರಿ, ಶಿರಿಬಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಪರದಾಡಿದರು. ಸಾವಿರಾರು ಪ್ರಯಾಣಿಕರು ಬೆಳಗಿನ ಜಾವದವರೆಗೆ ರೈಲಿನಲ್ಲೇ ಕಳೆದರು. ಬೆಳಗ್ಗೆ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ವಾಹನಗಳ ವ್ಯವಸ್ಥೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT