ಬೆಂಗಳೂರು: ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ತನ್ವೀರ್ ಎಂದು ಗುರುತಿಸಲಾಗಿದೆ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ತನ್ವೀರ್ ನಿನ್ನೆ ಸಂಜೆ ಪಿ.ಜಿಯಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ವೀರ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯವನ್ನು ಸಹ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.