ಡಾ ಜಿ ಪರಮೇಶ್ವರ್  
ರಾಜ್ಯ

Muda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​'ಗೆ ಅನುಮತಿಸಿದರೆ ಕಾನೂನು ಹೋರಾಟ- ಗೃಹ ಸಚಿವ ಪರಮೇಶ್ವರ್​

ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕೂ ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ.

ಬೆಂಗಳೂರು: ಮುಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಅನುಮತಿ ನೀಡಿದ್ದೇ ಆದರೆ ಕಾನೂನು ಹೋರಾಟ ನಡೆಸುತ್ತೇವೆಂದು ಗೃಹ ಸಚಿವ ಪರಮೇಶ್ವರ್​ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು‌ ಎಂದು ಹೇಳಿದರು.

ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕೂ ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಜುಲೈ 26ರಂದು ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ಮನವಿ ಕೊಡುತ್ತಾರೆ. ಅದೇ ದಿನ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯುತ್ತಾರೆ. ಮುಖ್ಯ ಕಾರ್ಯದರ್ಶಿಯವರು ಹೋಗಿ ಸ್ಪಷ್ಟನೆ ನೀಡಿ ಬಂದಿದ್ದಾರೆ.‌ ಅದೇ‌ ದಿನ ಸಂಜೆ ಸಿಎಂ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯಪಾಲರು ಸಾಮಾನ್ಯ ರಾಜಕಾರಣಿಯೋ ಅಥವಾ ಅಧಿಕಾರಿಯೋ ಅಲ್ಲ. ಸಂವಿಧಾನದ ಮುಖ್ಯಸ್ಥರು. ಅನೇಕ ಪ್ರಕರಣಗಳು ಅವರ ಕಚೇರಿಯಲ್ಲಿ ಬಾಕಿ ಉಳಿದು, ಯಾವುದಕ್ಕೂ ಗಮನ ಹರಿಸದೇ ಏಕಾಏಕಿ ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇದೆ. ರಾಜ್ಯಪಾಲರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡುತ್ತೇವೆ. ಬಿಜೆಪಿ ಕಾಲದಲ್ಲಿ ಸಾಕಷ್ಟು ಹಗರಣಗಳಾಗಿವೆ. ತನಿಖೆಗೆ ಆದೇಶ ಮಾಡಿದ್ದೇವೆ. ವರದಿಯನ್ನು ಆಧರಿಸಿ ಮುಂದಿನ ಕ್ರಮದ ಬಗ್ಗೆ ಸಂಪುಟದಲ್ಲಿ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಅಡ್ವೋಕೇಟ್ ಜನರಲ್‌ಗೆ ತಿಳಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!