ಆರ್ ಅಶೋಕ online desk
ರಾಜ್ಯ

ಸಿದ್ದರಾಮಯ್ಯನವರೇ.. ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಚೆಲ್ಲಾಟ?: ತುಂಗಭದ್ರಾ ಡ್ಯಾಂ ಗೇಟ್ ಬಗ್ಗೆ ಆರ್ ಅಶೋಕ್

ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿರುವ ವಿಪಕ್ಷ ನಾಯಕ ಆರ್ ಅಶೋಕ್, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕಿಡಿ ಕಾರಿದ್ದಾರೆ.

ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ‌ಮುರಿದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿರುವುದರ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಕಳವಳ ವ್ಯಕ್ತಪಡಿಸಿದ್ದು ಸರ್ಕಾರದ ನಿರ್ಲಕ್ಷ್ಯವನ್ನು ಟೀಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಶೋಕ್, ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯುೂ ಸಹ ಕೈತಪ್ಪಬಹುದು ಎಂಬ ಆತಂಕದಲ್ಲಿದ್ದಾರೆ. ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ವ್ಯಸ್ತರಾಗಿರುವ ಉಪಮುಖ್ಯಮಂತ್ರಿಗಳಿಗೆ ಇಲಾಖೆಯ ಕರ್ತವ್ಯ ನಿರ್ವಹಿಸಲು ಪಾಪ ಸಮಯ ಎಲ್ಲಿದೆ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿರುವ ಅಶೋಕ್, ಕಳೆದ ವರ್ಷ ಬರಗಾಲದಿಂದ ಜಲಾಶಯ ಖಾಲಿಯಾಗಿದ್ದಾಗ ಡ್ಯಾಂನ ದುರಸ್ತಿ ಕಾರ್ಯ ಮಾಡಲು ಸಮಯವೂ ಇತ್ತು, ಅವಕಾಶವೂ ಇತ್ತು. ಆದರೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಸದಾಕಾಲ ಬ್ಯುಸಿಯಾಗಿರುವ ಡಿಸಿಎಂ ಸಾಹೇಬರಿಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆಸಕ್ತಿ ಎಲ್ಲಿದೆ? ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಸಿಎಂ ವಿರುದ್ಧವೂ ವಾಗ್ದಾಳಿ ನಡೆಸಿರುವ ಆರ್ ಅಶೋಕ್, ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಹೀಗೆ ಚೆಲ್ಲಾಟವಾಡುತ್ತೀರಿ? ನಿಮ್ಮ ದುರಾಡಳಿತದಿಂದ ಉತ್ತಮ ಮಳೆಯಾಗಿದ್ದರೂ ಇವತ್ತು ನಾಡಿನ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ. ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT