ತುಂಗ ಭದ್ರ ಜಲಾಶಯ online desk
ರಾಜ್ಯ

ನೀರನ್ನು ಉಳಿಸಿಕೊಂಡು ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್

ನೀರನ್ನು ಹೊರಗೆ ಬಿಡದ ಹೊರತು ಗೇಟ್ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ತುಂಗಭದ್ರಾ ಜಲಾಶಯಕ್ಕೆ ತೆರಳುವ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು ನೀರನ್ನು ಹೊರಗೆ ಬಿಡದ ಹೊರತು ಗೇಟ್ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಅಣೆಕಟ್ಟಿನ 1 ರಿಂದ 16 ನೇ ಗೇಟುಗಳನ್ನು ಸಿಡಬ್ಲ್ಯೂಸಿ ನಿರ್ವಹಣೆ ಮಾಡುತ್ತದೆ. 17 ರಿಂದ 32 ರವರೆಗಿನ ಜವಾಬ್ದಾರಿ ಕರ್ನಾಟಕ ಸರ್ಕಾರದ್ದಾಗಿದೆ. ಕೇಂದ್ರ ಜಲ ಆಯೋಗದವರು ಸಹ ಒಂದಷ್ಟು ತಂತ್ರಜ್ಞರನ್ನು ಕಳುಹಿಸಿದ್ದಾರೆ. ನಾವು ಸಹ ನುರಿತ ತಂತ್ರಜ್ಞರನ್ನು ಕಳುಹಿಸಿದ್ದೇವೆ. ನಾನು ಸಹ ಶನಿವಾರ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ದೂರವಾಣಿ ಸಂಪರ್ಕದಲ್ಲಿದ್ದು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿದರು.

ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದ ಕಾರಣ ಈ ತೊಂದರೆ ಉಂಟಾಗಿದೆ. ಭಾರಿ ಪ್ರಮಾಣದಲ್ಲಿ ನೀರು ಹೊರ ಹೋಗುತ್ತಿದ್ದು, ಅಣೆಕಟ್ಟಿನ ಭದ್ರತೆಯ ದೃಷ್ಟಿಯಿಂದ ಎಲ್ಲಾ ಗೇಟ್ ಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತಿದೆ. ಅಣೆಕಟ್ಟಿನ ಕೆಳಭಾಗದ ಹಾಗೂ ನದಿ ಪಾತ್ರದ ಎಲ್ಲಾ ಜನರಿಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆಯೇ ಎಂದು ಪ್ರಶ್ನಿಸಿದಾಗ "ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು. ಇದರಲ್ಲಿ ನಾನು ಯಾರ ಮಾತನ್ನು ಕೇಳುವುದಿಲ್ಲ. ಸ್ಥಳೀಯರು ಹಾಗೂ ರೈತರು ಒಂದಷ್ಟು ಅಭಿಪ್ರಾಯಗಳನ್ನು ಸೂಚಿಸುತ್ತಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಗೌರವಿಸಲಾಗುವುದು. ಆದರೆ ಅಂತಿಮವಾಗಿ ತಂತ್ರಜ್ಞರ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು. ನಮಗೆ ನಮ್ಮ ರೈತರ ಹಿತ ಮುಖ್ಯ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT