ಸಚಿವ ಈಶ್ವರ್ ಖಂಡ್ರೆ 
ರಾಜ್ಯ

10 ಸಾವಿರ ಕೋಟಿ ರೂ. ಮೌಲ್ಯದ 599 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸರ್ಕಾರ ಸೂಚನೆ

ಅರಣ್ಯ ನಿಯಂತ್ರಣ ಕಾಯಿದೆ 1900ರ ಸೆಕ್ಷನ್ 30ರ ಸಬ್ ಸೆಕ್ಷನ್ (1)ರ ಅಡಿಯಲ್ಲಿ ಯಾವುದೇ ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ.

ಬೆಂಗಳೂರು: ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯಲು ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಈ ಕುರಿತು ಟಿಪ್ಪಣಿ ಕಳುಹಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರು, ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ, ಅಂದರೆ 1896 ಜೂನ್ 11ರಲ್ಲೇ ಗೆಜೆಟ್ ಅಧಿಸೂಚನೆ ಆಗಿರುವ ಸಾವಿರಾರು ಕೋಟಿ ಬೆಲೆಯ ಭೂಮಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್‌ಎಂಟಿ ಸಂಸ್ಥೆ ಅಕ್ರಮವಾಗಿ ಸರ್ಕಾರಿ ಇಲಾಖೆಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿಯವರಿಗೆ ಮಾರಾಟ ಮಾಡುತ್ತಿಕುವುದು ಗಮನಕ್ಕೆ ಬಂದಿದೆ.

ಒಟ್ಟು 599 ಎಕರೆ ಅರಣ್ಯ ಭೂಮಿಯ ಪೈಕಿ ಎಚ್‌ಎಂಟಿಗೆ ನೀಡಲಾಗಿದೆ ಎನ್ನಲಾದ 469 ಎಕರೆ 32 ಗುಂಟೆಯಲ್ಲಿ ಖಾಲಿ ಇರುವ 281 ಎಕರೆಯನ್ನು ಮೊದಲಿಗೆ ವಶಕ್ಕೆ ಪಡೆದು ನಂತರ ಉಳಿದ ಭೂಮಿಯನ್ನು ವಶಕ್ಕೆ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದೇ ವೇಳೆ ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 64ಎ ಅಡಿಯಲ್ಲಿ ಈ ಹಿಂದೆ ಪ್ರಕ್ರಿಯೆ ನಡೆದಿದ್ದು ಭೂಮಿ ತೆರವಿಗೆ ಆದೇಶ ಆಗಿದ್ದರೂ, ಈವರೆಗೆ ಕ್ರಮ ವಹಿಸದ ಅರಣ್ಯಾಧಿಕಾರಿಗಳ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ಕುರಿತು ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

ಅರಣ್ಯ ನಿಯಂತ್ರಣ ಕಾಯಿದೆ 1900ರ ಸೆಕ್ಷನ್ 30ರ ಸಬ್ ಸೆಕ್ಷನ್ (1)ರ ಅಡಿಯಲ್ಲಿ ಯಾವುದೇ ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಯಾವುದೇ ಅರಣ್ಯ ಭೂಮಿಯನ್ನು ಮಂಜೂರಾತಿ ಮಾಡುವ ಮುನ್ನ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಲು ಮೊದಲಿಗೆ ಡಿ ನೋಟಿಫೈ ಮಾಡಿ, ಗೆಜೆಟ್ ಅಧಿಸೂಚನೆ ಮಾಡಬೇಕಾಗಿರುತ್ತದೆ. ಆದರೆ. ಈ ಜಮೀನನ್ನು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಹನುಮಾನ್ ಅವರು 1963ರಲ್ಲಿ ಎಚ್‍ಎಂಟಿಗೆ ದಾನಪತ್ರದ ಮೂಲಕ ವರ್ಗಾವಣೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಈ ದಾನಪತ್ರದ ಕುರಿತಂತೆ ಯಾವುದೇ ಗೆಜೆಟ್ ಅಧಿಸೂಚನೆಯೂ ಆಗಿರುವುದಿಲ್ಲ. ಈ ಭೂಮಿ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಕೂಡ ಆಗಿರುವುದಿಲ್ಲ.

ಶರಾವತಿ ಸಂತ್ರಸ್ತರಿಗೆ ಅರಣ್ಯ ಭೂಮಿ ನೀಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಾಗೂ ಗೋದಾವರ್ಮನ್ ಮತ್ತು ಕೇಂದ್ರ ಸರಕಾರದ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶಗಳು ಇದನ್ನು ಸ್ಪಷ್ಟಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಎಚ್‍ಎಂಟಿ ವಶದಲ್ಲಿರುವ ಮತ್ತು ಎಚ್‍ಎಂಟಿ ವಿವಿಧ ಸಂಸ್ಥೆ, ಇಲಾಖೆ, ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವ ಭೂಮಿ ಅರಣ್ಯವೇ ಆಗಿದೆ. ಈ ಹಿನ್ನೆಲೆಯಲ್ಲಿ ಐಎಯನ್ನು ಹಿಂಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ತನಿಖೆ ನಡೆಸುವಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT