ನಮ್ಮ ಮೆಟ್ರೋ 
ರಾಜ್ಯ

ಪ್ರಯಾಣಿಕರ ಗಮನಕ್ಕೆ: 13, 14, 15 ರಂದು ನಮ್ಮ ಮೆಟ್ರೋ ಹಸಿರು ಮಾರ್ಗ ಸಂಚಾರದಲ್ಲಿ ವ್ಯತ್ಯಯ!

ನಮ್ಮ ಮೆಟ್ರೋದ ಹಸಿರು ಮಾರ್ಗದ ರೈಲು ಸಂಚಾರದಲ್ಲಿ 13, 14, 15ರಂದು ಭಾರೀ ವ್ಯತ್ಯಯವಾಗಲಿದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಬೆಂಗಳೂರು: ನಮ್ಮ ಮೆಟ್ರೋದ ಹಸಿರು ಮಾರ್ಗದ ರೈಲು ಸಂಚಾರದಲ್ಲಿ 13, 14, 15ರಂದು ಭಾರೀ ವ್ಯತ್ಯಯವಾಗಲಿದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ಆಗಸ್ಟ್ 13ರಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಈ ಮಾರ್ಗದಲ್ಲಿ ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

ಆಗಸ್ಟ್ 14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು, ಬೆಳಿಗ್ಗೆ 5ರ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಇನ್ನು ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 13 ಮತ್ತು 14 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆಗಸ್ಟ್ 14 ಮತ್ತು 15ರಂದು ಬೆಳಿಗ್ಗೆ 5 ಗಂಟೆಗೆ ಸಂಚಾರ ಪ್ರಾರಂಭವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!