ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಆರೋಪಿಯ ಅಟ್ಟಾಡಿಸಿ ಕೊಲೆ

2018ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ನಡೆದಿತ್ತು. ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವೂದ್, ಸಮೀರ್, ರಿಯಾಝ್, ನಮೀರ್, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಈ ಪ್ರಕರಣದ ಆರೋಪಿಗಳಾಗಿದ್ದರು.

ಸಮೀರ್
Manjula VN
Updated On : 12 Aug 2024, 11:03 am

ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ಭಾನುವಾರ ನಡೆದಿದೆ.

ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ದಾಳಿ ನಡೆಸಲು ಮುಂದಾಗಿದೆ. ಅಪಾಯ ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದ.

ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ, ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ಮಾಡಿದೆ.

Advertisement

Advertisement

ಘಟನೆಯ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರ ಜೊತೆಗೆ ಹುಡುಕಾಡಿದ್ದು, ಈ ವೇಳೆ ಅಟ್ಟಾಡಿಸಿಕೊಂಡು ಹೋದ ತಂಡ ಪತ್ತೆಯಾಗಿರಲಿಲ್ಲ. ಬಳಿಕ ಸಮೀರ್ ಓಡಿದ ಸ್ಥಳದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

2018ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ನಡೆದಿತ್ತು. ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವೂದ್, ಸಮೀರ್, ರಿಯಾಝ್, ನಮೀರ್, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಈ ಪ್ರಕರಣದ ಆರೋಪಿಗಳಾಗಿದ್ದರು.

ಪ್ರಕರಣದಲ್ಲಿ ಸಮೀರ್ ಎರಡನೇ ಆರೋಪಿಯಾಗಿದ್ದು, ದಾವೂದ್ ಮತ್ತು ಸಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಸಮೀರ್‌ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

ಹತ್ಯೆ ಪ್ರತೀಕಾರವಾಗಿ ಸಮೀರ್ ಕೊಲೆ ನಡೆಸಿರಬಹುದು ಮಂಗಳೂರು ನಗರ ಪೊಲೀಸರು ಶಂಕಿಸಿದ್ದಾರೆ. ಭಾನುವಾರ ರಾತ್ರಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರೆದಿದೆ.

Also Read

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments