ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದ ದೃಶ್ಯ 
ರಾಜ್ಯ

BMTC ವೋಲ್ವೋ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ; ಆರು ವಾಹನ ಜಖಂ, ಬೈಕ್ ಸವಾರನಿಗೆ ಗಾಯ; Video

ವೋಲ್ವೋ ಬಸ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಹೊತ್ತು ಎಚ್‌ಎಸ್‌ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು.

ಬೆಂಗಳೂರು: ವೋಲ್ವೋ ಬಸ್‌ನ ಚಾಲಕ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ದ್ವಿಚಕ್ರ ವಾಹನ ಸೇರಿದಂತೆ ಆರು ವಾಹನಗಳು ಜಖಂಗೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಯಲ್ಲಿ ನಡೆದಿದೆ. ಅದೃಷ್ಟವಶಾತ್ ದುರ್ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಹೆಬ್ಬಾಳ ಮೇಲ್ಸೇತುವೆಯಲ್ಲಿ ನಿನ್ನೆ ಬೆಳಗ್ಗೆ 9.47ರಿಂದ 9.50ರ ನಡುವೆ ಈ ಘಟನೆ ನಡೆದಿದ್ದು, ವೋಲ್ವೋ ಬಸ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಹೊತ್ತು ಎಚ್‌ಎಸ್‌ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು.

ಅಪಘಾತದ 2.20 ನಿಮಿಷಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಚಾಲಕನಿಗೆ ಅಪಘಾತದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಸ್ಪಷ್ಟವಾಗಿ ಕಾಣಬಹುದು. ಚಾಲಕ ಫ್ಲೈಓವರ್‌ನಲ್ಲಿ ಪೀಕ್ ಅವರ್ ಟ್ರಾಫಿಕ್‌ನಲ್ಲಿ ನಿಧಾನವಾಗಿ ಚಾಲನೆ ಮಾಡುತ್ತಿದ್ದರು.

ಅಪಘಾತ ಸಂಭವಿಸಿದ ತಕ್ಷಣ ಚಾಲಕ ಮತ್ತು ಕಂಡಕ್ಟರ್ ಅಪಘಾತ ಸ್ಥಳದಲ್ಲಿಯೇ ಇದ್ದು ವಾಹನ ಸವಾರರ ಸ್ಥಿತಿಯನ್ನು ಪರಿಶೀಲಿಸಿದರು. ಹಾನಿಗೀಡಾದ ವಾಹನಗಳಲ್ಲಿ ಕಾರು ಕೂಡ ಸೇರಿದೆ. ಅಪಘಾತಕ್ಕೆ ನಿಖರ ಕಾರಣಗಳನ್ನು ಪತ್ತೆ ಮಾಡಲಾಗುತ್ತಿದೆ.

ಬೆಂಗಳೂರು ಉತ್ತರ ವಿಭಾಗದ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದಾಗಲು ಕಾರಣವೇನು?: ತನಿಖೆ ಆರಂಭಿಸಿದ DGCA

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ, ತಿರುಗೇಟು ನೀಡಲು ಸಿಎಂ ಪ್ರತಿತಂತ್ರ

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ; ಸಿಎಂ ಸಿದ್ದರಾಮಯ್ಯ

SCROLL FOR NEXT