ಸಾಂದರ್ಭಿಕ ಚಿತ್ರ  
ರಾಜ್ಯ

78ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನಾವರಣ!

ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನವು ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಸಂಪೂರ್ಣ ಸಿದ್ಧಗೊಂಡಿದೆ.

ಈ ಬಾರಿ 400 ಮಂದಿ ಶಾಲಾ ಮಕ್ಕಳಿಂದ ‘ಕಾಂಗ್ರೆಸ್ ಸರ್ಕಾರದ ಐದು ಮಹತ್ವಾಕಾಂಕ್ಷೆ ಖಾತ್ರಿ ಯೋಜನೆ’ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಳೆದ ಮೂರು ದಿನಗಳಿಂದ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ನಡೆಯುತ್ತಿದೆ. ಈ ಬಾರಿ ಸುಮಾರು 8,000 ಜನರು ಭಾಗವಹಿಸಲಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

35 ತಂಡಗಳಿಂದ ಅಂತಿಮ ತಾಲೀಮು ನಡೆಸಲಾಯಿತು. ನಾಡ ಗೀತೆ, ರೈತ ಗೀತೆ ಹಾಗೂ ಮೋಟಾರ್ ಸೈಕಲ್ ಸಾಹಸ ತಂಡದ ಪ್ರದರ್ಶನಕ್ಕೆ ರಿಹರ್ಸಲ್ ನಡೆಯಿತು.

ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗುರುವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ

  • ಶ್ರೀಪಾದ ದೇವರಾಜ್ ಮತ್ತು ತಂಡದಿಂದ ನಾಡಗೀತೆ ಹಾಗೂ ರೈತ ಗೀತೆ

  • 750 ಶಾಲಾ ಮಕ್ಕಳಿಂದ "ಜಯಭಾರತಿ" ನೃತ್ಯ ನಾಟಕ

  • 700 ಶಾಲಾ ಮಕ್ಕಳಿಂದ ರಾಣಿ ಅಬ್ಬಕ್ಕ ದೇವಿ ನಾಟಕ

  • ಮಲ್ಲಕಂಬ

  • ಕಳರಿಪಯಟ್ಟು

  • ಪ್ಯಾರಾ ಮೋಟಾರ್

  • ಮೋಟಾರ್ ಸೈಕಲ್ ಶೋ

ಸಾರ್ವಜನಿಕರಿಗೆ 3 ಸಾವಿರ ಆಸನ, ಅತಿ ಗಣ್ಯ ವ್ಯಕ್ತಿಗಳಿಗೆ 2 ಸಾವಿರ ಆಸನ, ಸ್ವಾತಂತ್ರ್ಯ ಹೋರಾಟಗಾರರಿಗೆ, ರಕ್ಷಣಾ ಇಲಾಖೆ ಅಧಿಕಾರಿಗಳಿಗೆ 750, ಇತರೆ ಇಲಾಖೆ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳಿಗೆ 2 ಸಾವಿರ ಆಸನ ಸೇರಿ ಒಟ್ಟು ಎಂಟು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT