ಬೆಂಗಳೂರು: HMT ಭೂಮಿ ವಶಕ್ಕೆ ಪಡೆಯುವ ಕರ್ನಾಟಕ ಅರಣ್ಯ ಇಲಾಖೆ ಪತ್ರದ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಕೆಂಡಮಂಡಲರಾಗಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HMT ಕಂಪನಿಂದ 299 ಎಕರೆ ವಿಸ್ತೀರ್ಣದ ಭೂಮಿಯನ್ನು ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಕರ್ನಾಟಕ ಅರಣ್ಯ ಇಲಾಖೆ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮೊನ್ನೆ ಪತ್ರ ಬರೆದಿದೆ. ಯಾವ ಆಧಾರದ ಮೇಲೆ ಈ ಪತ್ರ ಬರೆಯಲಾಯಿತು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಪ್ರಶ್ನಿಸಿದರು.

ಅರಣ್ಯ ಭೂಮಿ ಹಾಗೂ ಎಚ್ ಎಂಟಿ ಕಂಪನಿ ಜಮೀನುಗಳ ಕುರಿತು ಮಾಹಿತಿ ಇಲ್ಲದೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಮೇಲಿನ ಹಗೆತನಕ್ಕೆ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ದೂರಿದ ಕುಮಾರಸ್ವಾಮಿ, ಎಚ್ ಎಂಟಿ ಕಂಪನಿಯ ಜಮೀನನ್ನು ಒತ್ತುವರಿ ನೆಪದಲ್ಲಿ ರಾಜ್ಯ ಸರ್ಕಾರ ವಶಕ್ಕೆ ಪಡೆಯುವ ದುಸ್ಸಾಹಸ ಮಾಡಬಾರದು ಎಂದರು.