ಸಂಗ್ರಹ ಚಿತ್ರ 
ರಾಜ್ಯ

10 ದಿನಗಳಿಂದ ಪತಿ ನಾಪತ್ತೆ: ಹುಡುಕಿ ಕೊಡುವಂತೆ ಪೊಲೀಸರಿಗೆ ಮಹಿಳೆ ಮನವಿ

ಆ.4ರಂದು ಮಧ್ಯಾಹ್ನ 12.42ಕ್ಕೆ ಮನೆ ಯಿಂದ ಬೈಕ್‌ನಲ್ಲಿ ಹೊರಗೆ ಹೋಗಿದ್ದು, 25 ನಿಮಿಷದ ಬಳಿಕ ಬ್ಯಾಂಕ್‌ ಖಾತೆಯಿಂದ 1.80 ಲಕ್ಷ ರೂ. ಡ್ರಾ ಮಾಡಿದ್ದಾರೆ. ಬಳಿಕ ಕರೆ ಮಾಡಿದರೆ ಮೊಬೈಲ್‌ ಸ್ವಿಚ್‌ ಆಫ್ ಬಂದಿದೆ.

ಬೆಂಗಳೂರು: ನಾಪತ್ತೆಯಾಗಿರುವ ಪತಿಯನ್ನು ಹುಡುಕಿ ಕೊಡುವಂತ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಹಾಗೂ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.

ಟಾಟಾ ನಗರದ 5ನೇ ಮುಖ್ಯ ರಸ್ತೆ ನಿವಾಸಿ ವಿಪಿನ್ ಗುಪ್ತಾ (37) ನಾಪತ್ತೆಯಾಗಿರುವ ಸಾಫ್ಟ್ ವೇರ್ ಎಂಜಿನಿಯರ್. ಇವರ ಪತ್ನಿ ಶ್ರೀಪರ್ಣಾ ದತ್ ಎಂಬುವರು ನೀಡಿದ ದೂರಿನ ಮೇರೆಗೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಪಿನ್ ಗುಪ್ತಾ ಪತ್ತೆಗಾಗಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಉತ್ತರ ಪ್ರದೇಶದ ಲಖನೌ ಮೂಲದ ವಿಪಿನ್‌ ಗುಪ್ತಾ, ಪತ್ನಿ ಶ್ರೀಪರ್ಣಾ ಹಾಗೂ ಇಬ್ಬರು ಪುತ್ರಿ ಯರ ಜೊತೆಗೆ ಟಾಟಾನಗರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್‌ ಆಗಿರುವ ವಿಪಿನ್‌ ಗುಪ್ತಾ ಕಳೆದ ಜೂನ್‌ನಲ್ಲಿ ಉದ್ಯೋಗ ತೊರೆದಿದ್ದರು. ಹೊಸ ಉದ್ಯೋಗಕ್ಕಾಗಿ ಹುಡುಕಾಟದಲ್ಲಿ ತೊಡಗಿದ್ದರು.

ಆ.4ರಂದು ಮಧ್ಯಾಹ್ನ 12.42ಕ್ಕೆ ಮನೆಯಿಂದ ಬೈಕ್‌ನಲ್ಲಿ ಹೊರಗೆ ಹೋಗಿದ್ದು, 25 ನಿಮಿಷದ ಬಳಿಕ ಬ್ಯಾಂಕ್‌ ಖಾತೆಯಿಂದ 1.80 ಲಕ್ಷ ರೂ. ಡ್ರಾ ಮಾಡಿದ್ದಾರೆ. ಬಳಿಕ ಕರೆ ಮಾಡಿದರೆ ಮೊಬೈಲ್‌ ಸ್ವಿಚ್‌ ಆಫ್ ಬಂದಿದೆ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಹೀಗಾಗಿ ತಮ್ಮ ಪತಿಯನ್ನು ಹುಡುಕಿ ಕೊಡಿ ಎಂದು ಶ್ರೀಪರ್ಣಾ ಕೊಡಿಗೇಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಹಿಳೆ, ಪೊಲೀಸರ ಮೇಲೂ ಆರೋಪ ಮಾಡಿದ್ದಾರೆ.

ಪತಿ ನಾಪತ್ತೆ ದಿನವೇ ಕೊಡಿಗೇಹಳ್ಳಿ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದಾಗ ಪೊಲೀಸರು ಸರಿಯಾಗಿ ಸ್ಪಂದಿಸಲಿಲ್ಲ. ಬಳಿಕ ಆ.6ರಂದು ಎಫ್ಐಆರ್‌ ದಾಖಲಿಸಿದ್ದಾರೆ. ಇದುವರೆಗೂ ಪತಿ ಪತ್ತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ನನಗೆ 5 ತಿಂಗಳ ಮತ್ತು 14 ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ನಮಗೆ ಬೆಂಗಳೂರಿನಲ್ಲಿ ಯಾವುದೇ ಸಂಬಂಧಿಕರು ಇಲ್ಲ. ನಮ್ಮದು ಮಧ್ಯಮ ವರ್ಗದ ಕುಟುಂಬ. ಕೌಟುಂಬಿಕ ಜೀವನ ಉತ್ತಮವಾಗಿದೆ. ಆರ್ಥಿಕವಾಗಿ ಯಾವುದೇ ಸಮಸ್ಯೆಯಿಲ್ಲ. ಇಬ್ಬರು ಮಕ್ಕಳೊಂದಿಗೆ ನಾವು ಸುಖವಾಗಿದ್ದೆವು. ಆ.5ರಂದು ನಮ್ಮ ವಿವಾಹ ವಾರ್ಷಿಕೋತ್ಸವ ಇತ್ತು. ಪತಿ ವಿಪಿನ್‌ ನನಗೆ ಐಫೋನ್‌ ಗಿಫ್ಟ್ ಮಾಡಲು ಉತ್ಸುಕರಾಗಿದ್ದರು. ಆ.8ರಂದು ಕುಟುಂಬ ಸಮೇತ ಕಳಸ, ಹೊರನಾಡು, ಶೃಂಗೇರಿ, ಕುಕ್ಕೆ, ಧರ್ಮಸ್ಥಳಕ್ಕೆ ತೆರಳಲು ಪ್ಲ್ರಾನ್‌ ಮಾಡಿದ್ದೆವು. ಆದರೆ, ಆ.4ರಂದು ಪತಿ ನಾಪತ್ತೆಯಾಗಿದ್ದಾರೆ. ಅವರ ಜೀವದ ಬಗ್ಗೆ ಆತಂಕವಾಗಿದೆ. ದಯವಿಟ್ಟು ಪತಿ ವಿಪಿನ್‌ರನ್ನು ಹುಡುಕಿ ಕೊಡಿ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಶ್ರೀಪರ್ಣಾ ದತ್‌, ಈ ಪೋಸ್ಟ್ ನ್ನು ನಗರ ಪೊಲೀಸ್‌ ಆಯುಕ್ತ, ಸಿಎಂ ಹಾಗೂ ಮಾಧ್ಯಮಗಳಿಗೆ ಟ್ಯಾಗ್‌ ಮಾಡಿದ್ದಾರೆ.

ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು, ವಿಪಿನ್‌ ಗುಪ್ತಾ ಪತ್ತೆಗೆ ವಿವಿಧ ಆಯಾಮಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ನಡುವೆ ಪೊಲೀಸರ ತನಿಖೆ ವೇಳೆ ಟೆಕಿ ವಿಪಿನ್‌ ಗುಪ್ತಾ ಇದು 2ನೇ ಬಾರಿಗೆ ನಾಪತ್ತೆ ಯಾಗಿದ್ದಾರೆ ಎಂಬುದು ಗೊತ್ತಾಗಿದೆ.

8 ತಿಂಗಳ ಹಿಂದೆ ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡು ಒಂಟಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಬಳಿಕ ಗೋವಾದಲ್ಲಿ ಅವರನ್ನು ಪತ್ತೆಹಚ್ಚಿ ನಗರಕ್ಕೆ ಕರೆತಂದು ಕುಟುಂಬಕ್ಕೆ ಒಪ್ಪಿಸಿದ್ದೆವು. ಇದೀಗ ಮತ್ತೂಮ್ಮೆ ವಿಪಿನ್‌ ಗುಪ್ತಾ ಹಣದ ಸಮೇತ ನಾಪತ್ತೆಯಾಗಿದ್ದಾರೆ. ಈಗಾಗಲೇ ಪೊಲೀಸರ ವಿಶೇಷ ತಂಡ ವಿಪಿನ್‌ ಗುಪ್ತಾ ಪತ್ತೆಗೆ ಶೋಧ ಕಾರ್ಯದಲ್ಲಿ ತೊಡಗಿದ್ದು, ಶೀಘ್ರದಲ್ಲೇ ಪತ್ತೆಹಚ್ಚಲಾಗುವುದು ಎಂದು ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ.ಸಜಿತ್‌ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ