ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

78ನೇ ಸ್ವಾತಂತ್ರ್ಯೋತ್ಸವ: ರಾಜ್ಯದ 20 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ

ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ.

ಸಂಗ್ರಹ ಚಿತ್ರ
Shilpa D
Updated On : 14 Aug 2024, 11:57 am

ಬೆಂಗಳೂರು: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ.

ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್‌ಡಿ ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ.

ಅಧಿಕಾರಿಗಳು ಪೊಲೀಸ್‌ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ ಘೋಷಣೆ ಮಾಡಿದ್ದು, ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಪ್ರದಾನ ಮಾಡಲಾಗುತ್ತದೆ.

Advertisement

Advertisement

Also Read

ಗಣರಾಜ್ಯೋತ್ಸವ: ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement