ಸಂಗ್ರಹ ಚಿತ್ರ PTI
ರಾಜ್ಯ

SBI, PNB ಬ್ಯಾಂಕ್ ನಲ್ಲಿನ ತನ್ನ ಖಾತೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ!

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು 2011ರಲ್ಲಿ ಚೆಕ್ ಮೂಲಕ 25 ಕೋಟಿ ರೂಪಾಯಿ ಪಾವತಿಸಿತ್ತು.

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು ವಿಶ್ವವಿದ್ಯಾಲಯಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್‌ನಲ್ಲಿನ (PNB) ಎಲ್ಲಾ ಠೇವಣಿ ಮತ್ತು ಹೂಡಿಕೆಗಳನ್ನು ಹಿಂಪಡೆಯಲು ಮತ್ತು ಬ್ಯಾಂಕ್ ಜೊತೆ ಯಾವುದೇ ವ್ಯವಹಾರವನ್ನು ನಿಲ್ಲಿಸುವಂತೆ ಆದೇಶಿಸಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು 2011ರಲ್ಲಿ ಚೆಕ್ ಮೂಲಕ 25 ಕೋಟಿ ರೂಪಾಯಿ ಪಾವತಿಸಿತ್ತು. ಇದರಲ್ಲಿ 13 ಕೋಟಿ ರೂಪಾಯಿ ನಗದೀಕರಣವಾಗಿತ್ತು. ಆದರೆ ಬ್ಯಾಂಕ್ ಅಧಿಕಾರಿಗಳಿಂದ ನಡೆದಿದೆ ಎನ್ನಲಾದ ವಂಚನೆ ಪ್ರಕರಣದಿಂದಾಗಿ 12 ಕೋಟಿ ರೂಪಾಯಿ ಇನ್ನು ಮರುಪಾವತಿಯಾಗಿಲ್ಲ. ಈ ಪ್ರಕರಣವು ನ್ಯಾಯಾಲಯಗಳಲ್ಲಿ 10 ವರ್ಷಗಳಿಂದಲೂ ವಿಚಾರಣೆ ಹಂತದಲ್ಲಿದೆ.

ಅದೇ ರೀತಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 2013ರಲ್ಲಿ ಆಗಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಅವೆನ್ಯೂ ರಸ್ತೆಯಲ್ಲಿನ ಬ್ಯಾಂಕ್ ಖಾತೆಯಲ್ಲಿ 10 ಕೋಟಿ ನಿಶ್ಚಿತ ಠೇವಣಿ ಇಟ್ಟಿತ್ತು. ಈ ಹಣ ಸಹ ಮರುಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಹಣಕಾಸು ಕಾರ್ಯದರ್ಶಿ ಪಿ ಸಿ ಜಾಫರ್ (ಬಜೆಟ್ ಮತ್ತು ಸಂಪನ್ಮೂಲ) ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಮತ್ತು ಇತರ ಸಂಸ್ಥೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಲ್ಲಾ ಶಾಖೆಗಳಲ್ಲಿ ಮಾಡಿದ ಎಲ್ಲಾ ಠೇವಣಿ/ಹೂಡಿಕೆಗಳನ್ನು ಹಿಂಪಡೆಯಬೇಕು ಎಂದು ಈ ಸುತ್ತೋಲೆಯ ಮೂಲಕ ತಿಳಿಸಲಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಭವಿಷ್ಯದಲ್ಲಿ ಯಾವುದೇ ಠೇವಣಿ/ಹೂಡಿಕೆಗಳನ್ನು ಮಾಡಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಎರಡು ಬ್ಯಾಂಕ್‌ಗಳಲ್ಲಿನ ತಮ್ಮ ಖಾತೆಗಳನ್ನು ಮುಚ್ಚಲು ಮತ್ತು ಪ್ರಮಾಣೀಕೃತ ಕ್ಲೋಸರ್ ವರದಿಯನ್ನು ಸಲ್ಲಿಸಲು ಮತ್ತು ನಿಗದಿತ ಸ್ವರೂಪದಲ್ಲಿ ಠೇವಣಿ ಮತ್ತು ಹೂಡಿಕೆ ವರದಿಗಳ ವಿವರಗಳನ್ನು 2024ರ ಸೆಪ್ಟೆಂಬರ್ 20ರೊಳಗೆ ಹಣಕಾಸು ಇಲಾಖೆಗೆ ಕಳುಹಿಸುವಂತೆ ಸರ್ಕಾರವು ಸರ್ಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT