ಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಪೂಜೆ ನೆರವೇರಿಸಿದರು 
ರಾಜ್ಯ

TB Dam: ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಕೆಲಸ ಆರಂಭ; ಪೂಜೆ ನೆರವೇರಿಸಿದ ಸಚಿವ ಜಮೀರ್ ಅಹ್ಮದ್

ಹೊಸ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿ ಇಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಆರಂಭವಾಗಿದೆ. ಕಳೆದ ಭಾನುವಾರ 19ನೇ ಕ್ರಸ್ಟ್ ಗೇಟ್ ಮುರಿದಿತ್ತು.

ಕೊಪ್ಪಳ/ಹಂಪಿ(ಬಳ್ಳಾರಿ): ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು ಅದರ ರಿಪೇರಿ ಕೆಲಸಕ್ಕೆ ಇಂದು ಬುಧವಾರ ಪೂಜೆ ನೆರವೇರಿಸುವ ಮೂಲಕ ಕೆಲಸ ಆರಂಭವಾಗಿದೆ.

ಹೊಸ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿ ಇಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಆರಂಭವಾಗಿದೆ. ಕಳೆದ ಭಾನುವಾರ 19ನೇ ಕ್ರಸ್ಟ್ ಗೇಟ್ ಮುರಿದಿತ್ತು.

ಕ್ರಸ್ಟ್ ಗೇಟ್ ರಿಪೇರಿ ಮಾಡಲು ಡ್ಯಾನಲ್ಲಿನ ನೀರನ್ನು ಹಂತಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮಾಡುತ್ತಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿ ಪಾತ್ರದ ಜನರು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹಾಗೂ ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಟಿಬಿ ಬೋರ್ಡ್ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ಸಮೀಪಕ್ಕೆ ಮಕ್ಕಳನ್ನು, ಜಾನುವಾರುಗಳು ಹೋಗದಂತೆ ಎಚ್ಚರವಹಿಸಿ.

ಜನರಿಗೆ ಎಚ್ಚರಿಕೆ: ಟಿಬಿ ಡ್ಯಾಮ್​ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಯಾರೂ ಕೂಡ ನದಿ ಪಾತ್ರಕ್ಕೆ ಹೋಗದಂತೆ ಟಿಬಿ ಡ್ಯಾಮ್ ಕೆಳಭಾಗದ ಕೊಪ್ಪಳ ತಾಲೂಕು, ಗಂಗಾವತಿ ತಾಲೂಕು, ಕಾರಟಗಿ ತಾಲೂಕಿನ ಗ್ರಾಮಗಳಲ್ಲಿ ಡಂಗುರ ಸಾರಿ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ನಿನ್ನೆಯಿಂದ ಈವರಗೆ 13 ಟಿಎಂಸಿ ನೀರು ಡ್ಯಾಂ ನಿಂದ ಖಾಲಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!