ಸಿಎಂ ಸಿದ್ದರಾಮಯ್ಯ 
ರಾಜ್ಯ

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಎಂದವರಿಗೆ ಉತ್ತರ ಸಿಕ್ಕಿದೆ, ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತವೆ. ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಭಾಷಣದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ಸರ್ಕಾರದ ಗ್ಯಾರಂಟಿ ಗಳಿಂದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ. ಸುಮಾರು 4 ರಿಂದ 5 ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಅನೇಕ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತಿದೆ. ಇದರಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸರ್ಕಾರದ ತಾರತಮ್ಯ ವಿರುದ್ಧ ಮುಖ್ಯಮಂತ್ರಿಗಳು ಆಕ್ರೋಶದ ಭಾಷಣ ಮಾಡಿದರು.

ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಬ್ದಾರಿಯಾದರೆ. ಇವುಗಳಿಗೆ ಪೂರಕ ಸಂಪನ್ಮೂಲ ಒದಿಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ಕೆಲ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ಪರಿಹಾರ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ ಮತದಾರರು. ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದರು.

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ ಆಗಿದೆ. ಈವರೆಗೆ 25,258 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡೋದಾಗಿ ಘೋಷಿಸಲಾಗಿತ್ತು. ಆದರೆ, ಕೇಂದ್ರದ ಅಸಹಕಾರದಿಂದ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗಿದೆ. ಈವರೆಗೆ 4.08 ಕೋಟಿ ಫಲಾನುಭವಿಗಳಿಗೆ 7,763 ಕೋಟಿ ನೆರವು ನೀಡಲಾಗಿದೆ.

ಉಚಿತವಾಗಿ 200 ಯೂನಿಟ್​ವರೆಗೆ ನೀಡುವ ಗೃಹಜ್ಯೋತಿ ಯೋಜನೆಯಡಿ ರಾಜ್ಯದ 1.60 ಕೋಟಿ ಕುಟುಂಬಗಳು ಈ ಯೋಜನೆ ಪಡೆದುಕೊಳ್ಳುತ್ತಿವೆ. ಶಕ್ತಿ 8,844 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯುವನಿಧಿ ಯೋಜನೆಯಡಿ 1.31 ಲಕ್ಷ ಪದವಿ/ಡಿಪ್ಲೊಮಾ ನಿರುದ್ಯೋಗಗಳಿಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ 91 ಕೋಟಿ ರೂ. ಗಳನ್ನ ಭರಿಸಲಾಗಿದೆ ಎಂದು ತಿಳಿಸಿದರು. ಭಾಷಣದ ವೇಳೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದೆ ಎಂದು ಎರಡೆರೆಡು ಬಾರಿ ಒತ್ತಿ ಹೇಳಿದರು.

ಭಾಷಣಜ ವೇಳೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆ ತಪ್ಪಿಸಲು ಫೆರಿಫೆರಲ್ ರಿಂಗ್ ರೋಡ್ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು 100 ವರ್ಷಗಳಾಗಿವೆ. ಅಂಬೇಡ್ಕರ್ ಬಹಿಷ್ಕೃತ ಹಿತಕಾರಣಿ ಸಭಾ ಸ್ಥಾಪನೆಗೂ 100 ವರ್ಷಗಳಾಗಿವೆ. ಹೀಗಾಗಿ ಶತಮಾನೋತ್ಸವವನ್ನು ಆಚರಿಸುವುದಾಗಿ ಸಿಎಂ ಘೋಷಣೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT