ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  
ರಾಜ್ಯ

ಸಿದ್ದರಾಮಯ್ಯನವರು ಯಾವತ್ತಿಗೂ ಸ್ಟ್ರಾಂಗ್, ಅದಕ್ಕೆ ಅವರಿಗೆ ಹುಲಿ ಎಂದು ಹೆಸರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗೆ ಉನ್ನತೀಕರಿಸುವ ಪ್ರಕ್ರಿಯೆ ಜಾರಿಯಲ್ಲಿದೆ, ವರದಿ ಬಂದ ತಕ್ಷಣ ಹೆಚ್ಚಿನ ಮಾಹಿತಿ ನೀಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಉಡುಪಿ: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣದ ವೇಳೆ ಬುಲೆಟ್ ಪ್ರೂಫ್ ತೆಗೆಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ರಾಜ್ಯ ಶಾಂತಿ ಪ್ರಿಯರು. ಕರ್ನಾಟಕ ರಾಜ್ಯದಲ್ಲಿ ಬುಲೆಟ್ ಪ್ರೂಫ್ ಬೇಕಾ, ನಮ್ಮ ಸಿದ್ದರಾಮಯ್ಯನವರು ಯಾವತ್ತೂ ಸ್ಟ್ರಾಂಗ್ ಅದರಲ್ಲಿ ಎರಡು ಮಾತಿಲ್ಲ‌. ಸಿದ್ದರಾಮಯ್ಯ ನವರಿಗೆ ಹುಲಿ ಎಂದು ಹೆಸರು ಬಂದಿರುವುದು ಇದಕ್ಕೆ ಎಂದು ಹೊಗಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರವಂತೆ - ಸೋಮೇಶ್ವರ ಬೀಚ್ ಬಂದರು ಕಾಮಗಾರಿ ವಿಳಂಬವಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಗುತ್ತಿಗೆದಾರ ಬಿರಾದಾರ್ ಜೊತೆ ಮಾತನಾಡಿದ್ದೇನೆ. ಕಾಮಗಾರಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇವೆ. ನಿರ್ದಿಷ್ಟ ಅವಧಿಯಲ್ಲಿ ಕೆಲಸ ಮುಗಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಉಡುಪಿಯಲ್ಲಿ ಕಡಲ್ಕೊರೆತದಿಂದ ಉಂಟಾಗುತ್ತಿರುವ ಸಮಸ್ಯೆಯ ಪರಿಹಾರಕ್ಕಾಗಿ 5 ರಿಂದ 10 ಕೋಟಿ ಬಿಡುಗಡೆ ಮಾಡಿಸಿಕೊಂಡು ಬರುವುದಾಗಿ ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗೆ ಉನ್ನತೀಕರಿಸುವ ಪ್ರಕ್ರಿಯೆ ಜಾರಿಯಲ್ಲಿದೆ, ವರದಿ ಬಂದ ತಕ್ಷಣ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.

ಕಂಚಿನಡ್ಕ ಬಳಿ ಟೋಲ್ ಗೇಟ್ ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್ ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ ಪಿ, ಇತರ ಅಧಿಕಾರಿಗಳ ಜೊತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ