ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ಚೇತನ್. 
ರಾಜ್ಯ

PSI ಪರಶುರಾಮ್ ಸಾವು ಪ್ರಕರಣ: CID ಮೇಲೆ ನಂಬಿಕೆಯಿಲ್ಲ CBI ಗೆ ಹಸ್ತಾಂತರಿಸಿ; ನಟ ಚೇತನ್ ಆಗ್ರಹ

ಯಾದಗಿರಿ ಶಾಸಕ ಕಾಂಗ್ರೆಸ್ ಪಕ್ಷದವರಾಗಿರುವುದರಿಂದ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಾವು ಸಿಐಡಿ ತನಿಖೆಯನ್ನು ನಂಬುವುದಿಲ್ಲ. ಸಿಬಿಐ ತನಿಖೆಗೆ ವಹಿಸಬೇಕು...

ಕಲಬುರಗಿ: ಯಾದಗಿರಿ ನಗರ ಠಾಣೆಯ ಮೃತ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಟ ಚೇತನ್ ಅಹಿಂಸಾ ಅವರು ಆಗ್ರಹಿಸಿದ್ದಾರೆ.

ಪರಶುರಾಮ್ ಅವರ ಸಹೋದರ ಹನುಮಂತ್ ಅವರ ನೇತೃತ್ವದಲ್ಲಿ ನಿನ್ನೆಯಷ್ಟೇ ಯಾದಗಿರಿಯಲ್ಲಿ ಬೃಹತ್ ಸಮಾವೇಶ ನಡೆಯಿತು.

ಯಾದಗಿರಿ ನಗರದ ಮೈಲಾಪುರ ಅಗಸಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿ ಚೌಕ್, ಕನಕ ವೃತ್ತ, ಅಂಬೇಡ್ಕರ್ ಚೌಕ್, ಸುಭಾಷ್ ಚಂದ್ರ ಬೋಸ್ ವೃತ್ತದ ಮೂಲಕ ಶಾಸಕರ ಕಚೇರಿ ತಲುಪಿತು. ಸುಭಾಷ್ ಚಂದ್ರ ಬೋಸ್ ವೃತ್ತದ ಬಳಿ ಕೆಲ ನಿಮಿಷಗಳ ಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಟ ಚೇತನ್ ಅಹಿಂಸಾ ಅವರು, ಯಾದಗಿರಿ ಶಾಸಕ ಕಾಂಗ್ರೆಸ್ ಪಕ್ಷದವರಾಗಿರುವುದರಿಂದ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಾವು ಸಿಐಡಿ ತನಿಖೆಯನ್ನು ನಂಬುವುದಿಲ್ಲ. ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಯಾದಗಿರಿ ಶಾಸಕರ ಜೊತೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದ್ದಾರೆ. ಆದರೂ, ಶಾಸಕರು ಕುಟುಂಬಸ್ಥರೊಂದಿಗೆ ಮಾತನಾಡಿಲ್ಲ. ಘಟನೆ ನಡೆದು ಎರಡು ವಾರ ಕಳೆದರೂ ತನಿಖಾ ಸಂಸ್ಥೆ ಎಫ್‌ಐಆರ್‌ನಲ್ಲಿ ಹೆಸರಿಸಿರುವ ಆರೋಪಿಗಳನ್ನು ಬಂಧಿಸಿಲ್ಲ ಅಥವಾ ವಿಚಾರಣೆ ನಡೆಸಿಲ್ಲ. ಸಿಐಡಿ ಅಧಿಕಾರಿಗಳು ಇದುವರೆಗೆ ಮೃತ ಪಿಎಸ್‌ಐ ಕುಟುಂಬದ ಸದಸ್ಯರಿಂದ ಯಾವುದೇ ಮಾಹಿತಿ ಸಂಗ್ರಹಿಸಿಲ್ಲ ಎಂದು ಹೇಳಿದರು.

ಈ ನಡುವೆ ಪ್ರತಿಭಟನಾ ನಿರತರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT