ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಜಮೀರ್ ಖಾನ್  
ರಾಜ್ಯ

TB dam ಗೇಟ್ ಅಳವಡಿಸುವ ಕಾರ್ಮಿಕರಿಗೆ ನನ್ನ ಕಡೆಯಿಂದ 50 ಸಾವಿರ ರೂ: ಸಚಿವ ಜಮೀರ್ ಪ್ರೋತ್ಸಾಹ

ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಡುತ್ತಿದ್ದಾರೆ. ಸ್ಟಾಪ್‌ಲಾಗ್‌ಗಳನ್ನು ಅಳವಡಿಸಲು ಅಣೆಕಟ್ಟಿನ ಒಂದು ಬೀಮ್ ಅಡ್ಡಿಯಾಗುತ್ತಿದೆ ಎಂದು ಕೆಲವು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸಪೇಟೆ(ಬಳ್ಳಾರಿ): ತುಂಗಭದ್ರಾ ಜಲಾಶಯ (Tungabhadra Dam) ಸ್ಟಾಪ್‌ಲಾಗ್‌ ಗೇಟ್‌ ಅಳವಡಿಸುವ ಜಾಗಕ್ಕೆ ನಿನ್ನೆ ಸ್ವಾತಂತ್ರ್ಯ ದಿನಾಚರಣೆ ದಿನ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಖಾನ್ ಭೇಟಿ ನೀಡಿ ಕೆಲಸಗಾರರ ಜೊತೆ ಮಾತನಾಡಿ ಅವರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಿದರು.

ಈ ವೇಳೆ ಕೆಲಸಗಾರರಿಗೆ ಅವರು, ನೀವು ಧೈರ್ಯ ಕಳೆದುಕೊಳ್ಳದೇ ಕೆಲಸ ಮಾಡಿ. ನಾಳೆ ಗೇಟ್ ಕೂಡಿಸಿ ಕಾರ್ಯ ಯಶಸ್ವಿ ಮಾಡಿ. ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ ರೂಪಾಯಿ ಕೊಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಬೆನ್ನುತಟ್ಟಿದರು.

ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಡುತ್ತಿದ್ದಾರೆ. ಸ್ಟಾಪ್‌ಲಾಗ್‌ಗಳನ್ನು ಅಳವಡಿಸಲು ಅಣೆಕಟ್ಟಿನ ಒಂದು ಬೀಮ್ ಅಡ್ಡಿಯಾಗುತ್ತಿದೆ ಎಂದು ಕೆಲವು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

JSW ಉಕ್ಕು ಮತ್ತು ಇತರ ಎರಡು ಎಂಜಿನಿಯರಿಂಗ್ ಕಂಪನಿಗಳು ವಿನ್ಯಾಸಗೊಳಿಸಿದ 4x20 ಚದರ ಅಡಿ ವಿಸ್ತೀರ್ಣದ ಮೂರು ಕಬ್ಬಿಣದ ಪ್ಲೇಟ್ ಗಳನ್ನು ತಂದು ಗೇಟ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಅವುಗಳ ಸಣ್ಣ ಗಾತ್ರದ ವ್ಯತ್ಯಾಸದಿಂದ ಹೊಸ ಕ್ರೆಸ್ಟ್ ಗೇಟ್ ಅನ್ನು ಸರಿಪಡಿಸಲು ಕಷ್ಟಕರವಾಗಿದೆ.

ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾದಲ್ಲಿ 25 ಟಿಎಂಸಿ ನೀರು ಜಲಾಶಯದಿಂದ ಹೊರಹೋಗುವುದನ್ನು ತಪ್ಪಿಸಿದಂತಾಗುತ್ತದೆ. ಮೊನ್ನೆಯವರೆಗೂ 25 ಸಾವಿರ ಕ್ಯೂಸೆಕ್‌ಗಿಂತ ಕಡಿಮೆ ಇದ್ದ ಒಳಹರಿವು ನಿನ್ನೆಯಿಂದ 35ಸಾವಿರ ಕ್ಯೂಸೆಕ್‌ಗೆ ಹೆಚ್ಚಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ