ರಾಜ್ಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಕಾಣುತ್ತಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಸಿಕ್ಕಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಬ್ಬರು ಕಾರ್ಯಕರ್ತರಿಂದ ದೂರುಗಳನ್ನು ಸ್ವೀಕರಿಸಿದ್ದಾರೆ, ಒಂದನ್ನು ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಹಾಂ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ದೂರನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಎಷ್ಟೇ ಸಮರ್ಥಿಸಿಕೊಂಡರೂ, ಕಾನೂನುಬದ್ಧವಾಗಿಯೇ ಪಡೆದಿದ್ದೇನೆ ಎಂದು ಹೇಳಿದರೂ ಕೂಡ ಮುಡಾದಿಂದ ಅವರ ಪತ್ನಿಗೆ ಹಂಚಿಕೆಯಾದ 14 ನಿವೇಶನಗಳಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಸ್ಪಷ್ಟವಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.

ಅಬ್ರಹಾಂಗೆ ಕರೆ: ಅತ್ತ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಇತ್ತ ರಾಜ್ಯಪಾಲರ ಕಚೇರಿಯಿಂದ ಅಬ್ರಹಾಂಗೆ ಕರೆ ಹೋಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತೇನೆ, ನಾನು ಈಗ ಮಡಿಕೇರಿಯಲ್ಲಿದ್ದು ಬೆಂಗಳೂರಿಗೆ ಮಧ್ಯಾಹ್ನ ಬರುತ್ತೇನೆ ಎಂದು ಅಬ್ರಹಾಂ ಹೇಳಿದ್ದಾರೆ.

ಏನಿದು ಮುಡಾ ಹಗರಣ?: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರಿನ ಪ್ರಮುಖ ಪ್ರದೇಶದಲ್ಲಿ ಮುಡಾ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಹೋಲಿಸಿದರೆ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿರುವ ಪರಿಹಾರದ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದು ಆರೋಪವಾಗಿದೆ.

ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಮುಡಾ ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತು.

ವಿವಾದಾತ್ಮಕ ಯೋಜನೆಯಡಿಯಲ್ಲಿ, ವಸತಿ ಬಡಾವಣೆಗಳನ್ನು ರೂಪಿಸಲು ಅವರಿಂದ ಸ್ವಾಧೀನಪಡಿಸಿಕೊಂಡಿರುವ ಅಭಿವೃದ್ಧಿಯಾಗದ ಭೂಮಿಗೆ ಬದಲಾಗಿ ಭೂಮಿ ಕಳೆದುಕೊಳ್ಳುವವರಿಗೆ ಮುಡಾ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ ಶೇಕಡಾ 50ರಷ್ಟು ಭೂಮಿ ಮಂಜೂರು ಮಾಡಿದೆ. ಮುಡಾ ಹಗರಣವು 4,000 ಕೋಟಿಯಿಂದ 5,000 ಕೋಟಿ ರೂಪಾಯಿಗಳದ್ದು ಎಂಬುದು ಪ್ರತಿಪಕ್ಷಗಳ ಆರೋಪವಾಗಿದೆ.

ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಕಾಂಗ್ರೆಸ್ ಸರ್ಕಾರವು ಜುಲೈ 14 ರಂದು ಮುಡಾ 'ಹಗರಣ'ದ ತನಿಖೆಗಾಗಿ ಮಾಜಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಪಿ ಎನ್ ದೇಸಾಯಿ ಅವರ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚಿಸಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೆ ಒಂದು ವಾರದ 'ಪಾದಯಾತ್ರೆ' ನಡೆಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT