ಎರಡು ಸ್ಕೂಟರ್ ಗಳನ್ನು ಫ್ಲೈ ಓವರ್‌ನಿಂದ ಕೆಳಗೆಸೆದ ದಾರಿಹೋಕರರು 
ರಾಜ್ಯ

ಬೆಂಗಳೂರಿನಲ್ಲಿ ವ್ಹೀಲಿಂಗ್‌ ಹುಚ್ಚಾಟ: ಎರಡು ಸ್ಕೂಟರ್ ಗಳನ್ನು ಫ್ಲೈ ಓವರ್‌ನಿಂದ ಕೆಳಗೆಸೆದ ದಾರಿಹೋಕರರು!

ಅನೇಕ ನೆಟಿಜನ್‌ಗಳು ದಾರಿಹೋಕರರ ಕ್ರಮವನ್ನು ಶ್ಲಾಘಿಸುತ್ತಿದ್ದಾರೆ ಮತ್ತು ಪೊಲೀಸರು ತಮ್ಮ ಅಂತಹ ಸ್ಟಂಟ್‌ಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಜನನಿಬಿಡ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್ ಸಾಹಸ ಮಾಡುತ್ತಿದ್ದ ಇಬ್ಬರನ್ನು ನೋಡಿ ಆಕ್ರೋಶಗೊಂಡ ಇತರ ವಾಹನ ಸವಾರರು, ಅವರನ್ನು ಹಿಡಿದು, ಅವರ ಎರಡು ಸ್ಕೂಟರ್‌ಗಳನ್ನು ನೆಲಮಂಗಲ ಮೇಲ್ಸೇತುವೆಯಿಂದ ಕೆಳಗೆ ಎಸೆದ ಘಟನೆ ಗುರುವಾರ ನಡೆದಿದೆ.

ಅನೇಕ ನೆಟಿಜನ್‌ಗಳು ದಾರಿಹೋಕರರ ಕ್ರಮವನ್ನು ಶ್ಲಾಘಿಸುತ್ತಿದ್ದಾರೆ ಮತ್ತು ಪೊಲೀಸರು ತಮ್ಮ ಅಂತಹ ಸ್ಟಂಟ್‌ಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರರು ಸೇರಿದಂತೆ ಇಬ್ಬರು ಯುವಕರು ತಮ್ಮ ಸ್ಕೂಟರ್‌ಗಳಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದರು.

ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರಲ್ಲೂಬ್ಬ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸಿಟ್ಟಿಗೆದ್ದ ವಾಹನ ಸವಾರರು ಆತನ ಮತ್ತು ಮತ್ತೊಬ್ಬ ಯುವಕನ ಸ್ಕೂಟರ್​ಅನ್ನು ಫ್ಲೈಓವರ್ ನಿಂದ ಕೆಳಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರು ಯುವಕರು ಮತ್ತು ಹಿಂಬದಿ ಸವಾರರು ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಅಲ್ಲಿ ನೆರೆದಿದ್ದ ವ್ಯಕ್ತಿಯೊಬ್ಬ ಘಟನೆಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಅದು ಶನಿವಾರ ವೈರಲ್ ಆಗಿದೆ.

ಪರಿಸ್ಥಿತಿ ತಿಳಿಗೊಳಿಸಿ ಸ್ಕೂಟರ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ದ್ವಿಚಕ್ರ ವಾಹನದ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಮತ್ತೊಂದೆಡೆ, ಗುರುವಾರ ಬೆಂಗಳೂರು ಈಶಾನ್ಯ ಸಂಚಾರ ಪೊಲೀಸರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೈಕ್​​ ವ್ಹೀಲಿಂಗ್​ ನಡೆಸಿ ಪುಂಡಾಟ ಮೆರೆದಿದ್ದ 44 ಯುವಕರನ್ನು ಯಲಹಂಕ ಪೊಲೀಸರು ವಶಕ್ಕೆ ಪಡೆದಿದ್ದರು. ಬೈಕ್​ ವ್ಹೀಲಿಂಗ್​​​ ಸಂಬಂಧ 33 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT