ಕರ್ನಾಟಕ ಹೈಕೋರ್ಟ್ online desk
ರಾಜ್ಯ

Muda case: ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಆದೇಶ ಬೆನ್ನಲ್ಲೇ Siddaramaiahಗೆ ಮತ್ತೊಂದು ಶಾಕ್, ಹೈಕೋರ್ಟ್ ನಲ್ಲಿ 'ಕೇವಿಯಟ್' ಸಲ್ಲಿಕೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನಾದರೂ, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಕೇವಿಯೆಟ್ ಅರ್ಜಿದಾರರು ಕೋರಿದ್ದಾರೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿ ಸೈಟ್ ಪಡೆದ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ.

ನಾಗರಭಾವಿ ನಿವಾಸಿಯಾದ ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಶನಿವಾರ ಈ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನಾದರೂ, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಕೇವಿಯೆಟ್ ಅರ್ಜಿದಾರರು ಕೋರಿದ್ದಾರೆ.

ಹೈಕೋರ್ಟ್ ವಕೀಲ ಎಂ.ಎಚ್.ಪ್ರಕಾಶ್ ವಕಾಲತ್ತು ವಹಿಸಿದ್ದಾರೆ ಎಂದು ತಿಳಿದುಬಂದಿದೆ.

"ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು" ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಈಗಾಗಲೇ "ಜನಪ್ರತಿನಿಧಿಗಳ ವಿಶೇಷ ಕೋರ್ಟ್" ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ" ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಸಿಎಂ‌ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.

ಕೇವಿಯಟ್ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ಜಿದಾರ ಪ್ರದೀಪ್ ಕುಮಾರ್, ‘ಕಾನೂನು ಪ್ರಕಾರ ಸಿದ್ದರಾಮಯ್ಯ ಅವರು ಹೈಕೋರ್ಟ್‌ನ ಮೊರೆ ಹೋಗಬಹುದು, ಕೇವಿಯಟ್ ಇಲ್ಲದೇ ಹೋದರೆ ಅವರಿಗೆ ರಿಲೀಫ್ ಕೂಡ ಸಿಗಬಹುದು. ಹೀಗಾಗಿ, ನಾನು ಕೇವಿಯಟ್ ಸಲ್ಲಿಸಿದ್ದೇನೆ ಎಂದಿದ್ದಾರೆ.

ಕರ್ನಾಟಕ ಸರ್ಕಾರ ಅಥವಾ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಮಂಜೂರಾತಿಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಕ್ರಮಗಳನ್ನು ಇನ್ನೂ ಕೈಗೊಂಡಿಲ್ಲ. ಅಂತೆಯೇ ಪ್ರಕರಣದ ಮತ್ತೊಬ್ಬ ದೂರುದಾರ ಟಿಜೆ ಅಬ್ರಹಾಂ ಅವರು ಕೂಡ ಸೋಮವಾರ ಕೇವಿಯಟ್ ಸಲ್ಲಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಇಂದು ಸಂಧಾನ ಮಾತುಕತೆ; Video

SCROLL FOR NEXT