ಡಾ.ಮಹೇಶ್ ಚಂದ್ರಗುರು  
ರಾಜ್ಯ

ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು (68) ಅವರು ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಗ್ಯಾಂಗ್ರೀನ್​​ನಿಂದ ಗುಣಮುಖರಾಗಿದ್ದ ಅವರನ್ನು‌ ಎರಡು ವಾರಗಳ ಹಿಂದೆ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಶನಿವಾರ ರಾತ್ರಿ 7:15ಕ್ಕೆ ವಿಜಯನಗರದ ಎರಡನೇ ಹಂತದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವರಾದ ಮಹೇಶ್ ಚಂದ್ರಗುರು 80ರ ದಶಕದಲ್ಲಿ ಹೈದರಾಬಾದ್​​ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಆ ಬಳಿಕ ಬಳಿಕ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಪ್ರಗತಿಪರ ಹಾಗೂ ವೈಚಾರಿಕ ಚಿಂತನೆಗಳನ್ನು ಬಿತ್ತುತ್ತಿದ್ದರು.

ಪ್ರೊ.ಮಹೇಶ್‌ ಚಂದ್ರ ಗುರು ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು.

ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

SCROLL FOR NEXT