ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

ವೈದ್ಯರು, ವೈದ್ಯಕೀಯ ಸಿಬ್ಬಂದಿ‌ಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ.

ಮಂಗಳೂರು: ವೈದ್ಯರು, ನರ್ಸ್‌ಗಳು ಮತ್ತು ಇತರ ವೈದ್ಯಕೀಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 20 ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದರು,

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ. ಇದರಲ್ಲಿ ರಾತ್ರಿಯೂ ಕೆಲಸ ಮಾಡುತ್ತಾರೆ. ಈ ಬಗ್ಗೆ ಎಲ್ಲರೂ ಗಮನಹರಿಸಬೇಕಾಗಿದೆ ಎಂದು ಹೇಳಿದರು.

ವೈದ್ಯರು, ಆಸ್ಪತ್ರೆ ‌ಸಿಬ್ಬಂದಿ ರಾತ್ರಿಯಿಡೀ ಕೆಲಸ ಮಾಡುತ್ತಾರೆ.‌ ಮಹಿಳಾ ಸಿಬ್ಬಂದಿ ಕೂಡ ಇರುತ್ತಾರೆ. ಎಲ್ಲರ ಸುರಕ್ಷತೆಯೂ ಮುಖ್ಯವಾಗಿದೆ. ಸುರಕ್ಷತೆ ಎನ್ನುವುದು ಆಸ್ಪತ್ರೆ ನಡೆಸುವವರ ಜವಾಬ್ದಾರಿಯೂ ಆಗಿದೆ. ಆಸ್ಪತ್ರೆ ವೈದ್ಯರು, ನರ್ಸ್, ಸಿಬ್ಬಂದಿ‌ ಸುರಕ್ಷತೆಗೆ ಚರ್ಚಿಸಲು ಮಂಗಳವಾರ ಎಲ್ಲ‌ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

ವೈದ್ಯರು, ನರ್ಸ್, ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದ್ದು, ಇದಕ್ಕೆ ರಾಜ್ಯಪಾಲರ ಅಂಕಿತ ಮಾತ್ರ ಬಾಕಿ ಇದೆ. ಈ ತಿದ್ದುಪಡಿಯ ಪ್ರಕಾರ ವೈದ್ಯರಿಗೆ, ನರ್ಸ್​ಗಳಿಗೆ ಯಾರೂ ಬಂದು ಹೆದರಿಸಬಾರದು, ನಿಂದಿಸಬಾರದು. ವಿಡಿಯೋ ಮಾಡುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದನ್ನು ಮಾಡಬಾರದು. ಇದು ಈ ತಿದ್ದುಪಡಿಯಾದ ಕಾಯ್ದೆಯಲ್ಲಿದೆ. ಇದನ್ನು ಎಲ್ಲಾ ವೈದ್ಯರು, ನರ್ಸ್​​ಗಳ ಸುರಕ್ಷತೆಗಾಗಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT