ಸಾಂದರ್ಭಿಕ ಚಿತ್ರ  
ರಾಜ್ಯ

ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಬೆಂಗಳೂರು: ಝೀಕಾ ವೈರಸ್ ಮತ್ತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ (Zika Virus)​​​ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ (Karnataka Health Department) ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್, ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು ಏಳು ಕೇಸು: ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ. ಝೀಕಾ ವೈರಸ್​ ಪತ್ತೆಯಾದ ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುತ್ತಿದೆ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸುತ್ತದೆ. ಝೀಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT