ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ; 24 ವರ್ಷದ ಡ್ಯಾನ್ಸ್ ಕೊರಿಯೋಗ್ರಾಫರ್ ಬಂಧನ

ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ನಿವಾಸಿ ಮುಕೇಶ್ವರನ್ ಎಂದು ಗುರುತಿಸಲಾಗಿದ್ದು, ಈತ ತಮಿಳುನಾಡು ಮೂಲದವನಾಗಿದ್ದು, 2003ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾನೆ.

ಬೆಂಗಳೂರು: ಆಗಸ್ಟ್ 18 ರಂದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 24 ವರ್ಷದ ಕೊರಿಯೋಗ್ರಾಫರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ನಿವಾಸಿ ಮುಕೇಶ್ವರನ್ ಎಂದು ಗುರುತಿಸಲಾಗಿದ್ದು, ಈತ ತಮಿಳುನಾಡು ಮೂಲದವನಾಗಿದ್ದು, 2003ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾನೆ. ನಮಗೆ ತಿಳಿದಿರುವಂತೆ ಅವರ ವಿರುದ್ಧ ಈಹಿಂಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ನಾವು ಆತನ ವಿರುದ್ಧ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ನಾವು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ, ಹೆಚ್ಚಿನ ತನಿಖೆಗಾಗಿ ನಾವು ಒಂದು ವಾರ ಕಾಲಾವಕಾಶವನ್ನು ಕೇಳುತ್ತಿದ್ದೇವೆ ಎಂದು ದಕ್ಷಿಣ ಪೊಲೀಸ್ ಉಪ ಆಯುಕ್ತ (ಡಿಸಿಪಿ) ಸಾರಾ ಫಾತಿಮಾ ತಿಳಿಸಿದ್ದಾರೆ.

ಭಾನುವಾರ ಮುಂಜಾನೆ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ವ್ಯಾಪ್ತಿಯ ಹೊಸೂರು ಸರ್ವಿಸ್ ರಸ್ತೆಯ ಪ್ರತ್ಯೇಕ ಸ್ಥಳದಲ್ಲಿ ಈ ಘಟನೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಹೆಬ್ಬಗೋಡಿ ನಿವಾಸಿಯಾಗಿರುವ ಸಂತ್ರಸ್ತೆ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಪ್ರಕರಣವನ್ನು ಭೇದಿಸಲು ಐದು ತಂಡಗಳನ್ನು ರಚಿಸಲಾಗಿತ್ತು. ಐದು ವಿಶೇಷ ತಂಡಗಳು ಸಂತ್ರಸ್ತೆಯ ಹೇಳಿಕೆ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿವೆ. ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿರುವ ಪೊಲೀಸರು, ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಸ್ನೇಹಿತನೊಂದಿಗೆ ಕೋರಮಂಗಲದ ಪಬ್‍ವೊಂದಕ್ಕೆ ಬಂದಿದ್ದಳು. ವಾಪಸ್ ಹೋಗುವಾಗ ಸ್ನೇಹಿತನ ಕಾರಿನಲ್ಲಿ ತೆರಳಿದ್ದಾಳೆ, ಈ ವೇಳೆ ಕಾರು ಅಪಘಾತವಾಗಿ, ಆಟೋ ಚಾಲಕರೊಂದಿಗೆ ವಾಗ್ವಾದ ನಡೆದಿದೆ. ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸ್ ಸ್ಥಳಕ್ಕೆ ಧಾವಿಸಿದಾಗ ಎಲ್ಲರೂ ಬೇರೆ ಬೇರೆ ಕಡೆ ತೆರಳಿದ್ದಾರೆ. ಯುವತಿ ಒಂಟಿಯಾಗಿ ಸ್ಥಳದಿಂದ ನಡೆದುಕೊಂಡೇ ತೆರಳಿದ್ದಳು. ಈ ವೇಳೆ ಮೋಟಾರ್ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಬಿಡುವುದಾಗಿ ಹೇಳಿ ಗಾಡಿ ಹತ್ತಿಸಿಕೊಂಡಿದ್ದಾನೆ.

ಸಂತ್ರಸ್ತೆಯ ಸ್ನೇಹಿತ ಬರುವುದರೊಳಗೆ ಅತ್ಯಾಚಾರ ಆರೋಪಿ ಸ್ಥಳದಿಂದ ಪರಾರಿ

ಬೈಕ್ ಹತ್ತಿಸಿಕೊಂಡ ವ್ಯಕ್ತಿ ಆಕೆಯನ್ನು ಹೊಸೂರು ಸರ್ವಿಸ್ ರಸ್ತೆಯ ಗೋಡೌನ್ ಬಳಿಯ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಪಾಯವನ್ನು ಗ್ರಹಿಸಿದ ಸಂತ್ರಸ್ತೆ ತನ್ನ ಸ್ನೇಹಿತನಿಗೆ SOS ತುರ್ತು ಕರೆ ಮಾಡಿದ್ದಾಳೆ. ಆಕೆಯ ಸ್ನೇಹಿತ ಸ್ವೀಕರಿಸಿದ ಸ್ಥಳದ ಆಧಾರದ ಮೇಲೆ ಆಕೆಯಿದ್ದ ಸ್ಥಳ ತಲುಪಲು 10-15 ನಿಮಿಷಗಳಲ್ಲಿ ಸಮಯ ತೆಗೆದುಕೊಂಡಿದ್ದು, ಈ ವೇಳೆಗಾಗಲೇ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು.

ಸ್ಥಳವನ್ನು ತಲುಪಿದಾಗ, ಆಕೆಯ ಸ್ನೇಹಿತನು ಮುಖದ ಮೇಲೆ ಗಾಯದ ಗುರುತುಗಳಿದ್ದ ಶರ್ಟ್ ಧರಿಸದ ವ್ಯಕ್ತಿ ಹೋಗುತ್ತಿರುವುದನ್ನು ನೋಡಿದ್ದಾನೆ. ಆತನನ್ನು ಹಿಡಿದುಕೊಳ್ಳಲು ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದಾನೆ. ಸ್ವಲ್ಪ ಸಮಯದ ನಂತರ, ಇನ್ನೊಬ್ಬ ಸ್ನೇಹಿತ ಬಂದು ನೆಲದ ಮೇಲೆ ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿದ್ದ ಸಂತ್ರಸ್ತೆಯನ್ನು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಾಖಲಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಸಂತ್ರಸ್ತೆಯ ಸ್ನೇಹಿತ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ಬೆಳಗ್ಗೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಭಾನುವಾರ ನಸುಕಿನ 1 ರಿಂದ 1.30 ರ ನಡುವೆ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಪೂರ್ವ), ರಮಣ್ ಗುಪ್ತಾ ತಿಳಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರಕ್ಕೆ ಶಿಕ್ಷೆ) ಅಡಿಯಲ್ಲಿ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT