ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ ಅಲ್-ಹಿಂದ್ ISIS ಮಾಡ್ಯೂಲ್ ಪ್ರಕರಣ: NIAಯಿಂದ ಮತ್ತಿಬ್ಬರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಗಳಾದ ಅಬ್ದುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜಿಬ್ ವಿರುದ್ಧ ಜಾರ್ಜ್‌ ಶೀಟ್ ಸಲ್ಲಿಸಲಾಗಿದೆ.

ನವದೆಹಲಿ: ಉದ್ದೇಶಿತ ಹತ್ಯೆಗಳು ಮತ್ತು ಇತರ ಜಿಹಾದಿ ಚಟುವಟಿಕೆಯಲ್ಲಿ ತೊಡಗಿರುವ ಕರ್ನಾಟಕ ಅಲ್-ಹಿಂದ್ ಐಸಿಸ್ ಸಂಘಟನೆಯ ಮತ್ತಿಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಚಾರ್ಜ್ ಶೀಟ್ ಸಲ್ಲಿಸಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಗಳಾದ ಅಬ್ದುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜಿಬ್ ವಿರುದ್ಧ ಜಾರ್ಜ್‌ ಶೀಟ್ ಸಲ್ಲಿಸಲಾಗಿದೆ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.

"ಈ ಇಬ್ಬರು ಆರೋಪಿಗಳು ಐಸಿಸ್‌ನ ದೊಡ್ಡ ಭಯೋತ್ಪಾದನೆಯ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ" ಎಂದು ಪ್ರಕಟಣೆ ತಿಳಿಸಿದೆ.

ಪಿತೂರಿ ಪ್ರಕರಣದಲ್ಲಿ ಸಲ್ಲಿಸಲಾದ ತನ್ನ ಎರಡನೇ ಪೂರಕ ಆರೋಪಪಟ್ಟಿಯಲ್ಲಿ, ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎನ್‌ಐಎ ಇಬ್ಬರ ವಿರುದ್ಧ ಆರೋಪ ಹೊರಿಸಿದೆ.

2020ರ ಜನವರಿ 23 ರಂದು ಬೆಂಗಳೂರು ನಗರ ಪೊಲೀಸರು ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಿದ್ದು, ಇದುವರೆಗೆ ಒಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video