ಸಿದ್ದರಾಮಯ್ಯ 
ರಾಜ್ಯ

ರಾಮನಗರ ಬಳಿಕ ಇದೀಗ ಎಲೆಕ್ಟ್ರಾನಿಕ್ ಸಿಟಿ ಹೆಸರು ಬದಲಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್‌ ಸಿಟಿಯ ಹೆಸರನ್ನು ಬದಲಿಸುವುದಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್‌ ಸಿಟಿಯ ಹೆಸರನ್ನು ಬದಲಿಸುವುದಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು ಎಂದು ಹೇಳಿದರು. ಅಲ್ಲದೆ ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ದೇವರಾಜ ಅರಸು ಗುಣಗಾನ ಮಾಡಿದ ಸಿಎಂ ಸಿದ್ದರಾಮಯ್ಯ ʼಹಿಂದುಳಿದವರನ್ನ ತುಳಿಯಲು ಈಗಲೂ ನಿರಂತರವಾಗಿ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿಗಳು ಇದನ್ನ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

1956 ನವೆಂಬರ್‌ 1ರಂದು ಕರ್ನಾಟಕ ಏಕೀಕರಣ ಆಗಿದ್ದರೂ, ದೇವರಾಜ ಅರಸು ಅವರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಹೀಗಾಗಿ ನವೆಂಬರ್‌ 1 ರಂದು ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ಅನಾವರಣಗೊಳಿಸಲಾಗುವುದು ಎಂದರು.

ಹಿಂದುಳಿದವರನ್ನ ತುಳಿಯಲು ಪ್ರಯತ್ನಗಳು ಈಗಲೂ ನಿರಂತರವಾಗಿ ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿಗಳು ಇದನ್ನ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT