ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಫುಟ್ಬಾಲ್ ಪಂದ್ಯ ವಿಚಾರದಲ್ಲಿ ಗಲಾಟೆ; ವಿದ್ಯಾರ್ಥಿಗಳ ಅಪಹರಣ ಮಾಡಿ ಹಲ್ಲೆ- ಇಬ್ಬರ ಬಂಧನ

ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕಳೆದ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು.

ಮಂಗಳೂರು: ಫುಟ್ಬಾಲ್ ಪಂದ್ಯದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಭೆ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ, ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕಳೆದ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ 19ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು, ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಆರೋಪಿಗಳು ಸಂತ್ರಸ್ತರ ಮೇಲೆ ಹಲ್ಲೆ ನಡೆಸುವಾಗ ಚಿತ್ರೀಕರಿಸಿದ್ದಾರೆ, ಹಲ್ಲೆ ನಡೆಸಿದ ನಂತರ ಸಂತ್ರಸ್ತರನ್ನು ಬಿಡಲಾಯಿತು.

ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕಲಂ 109, 115(2), 118(1), 127(2), 137(2), 189(2), 190, 191(1) ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು