ಸಿಸಿಟಿವಿಯಲ್ಲಿ ಚಿರತೆ ದೃಶ್ಯ ಸೆರೆ 
ರಾಜ್ಯ

ವಿಜಯಪುರ: ಮರಿಯೊಂದಿಗೆ ಚಿರತೆ ಪ್ರತ್ಯಕ್ಷ; ನಾಗರದಿನ್ನಿ ಗ್ರಾಮಸ್ಥರಲ್ಲಿ ಆತಂಕ

ಮಹಾದೇವ ಕೋಲ್ಕಾರ್ ಎಂಬುವವರ ಜಮೀನಿನ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ಬಳಿ ಸೋಮವಾರ ರಾತ್ರಿ ಚಿರತೆ ಹಾಗೂ ಮರಿಗಳು ಕಾಣಿಸಿಕೊಂಡಿವೆ. ತಮ್ಮ ಜಮೀನಿನ ಬಳಿ ಕಾಡು ಪ್ರಾಣಿಗಳನ್ನು ಗಮನಿಸಿದ ಸ್ಥಳೀಯ ರೈತ ಸುರೇಶ ಕುಬಕಡ್ಡಿ ಅವರು ಈ ದೃಶ್ಯಗಳನ್ನು ಮೊದಲು ವರದಿ ಮಾಡಿದ್ದಾರೆ.

ಮಹಾದೇವ ಕೋಲ್ಕಾರ್ ಎಂಬುವವರ ಜಮೀನಿನ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ತಾಯಿ ಚಿರತೆ ಮತ್ತು ಅದರ ಮರಿಗಳ ಚಲನವಲನ ಜಮೀನಿನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ಪ್ರದೇಶದಲ್ಲಿ ಅವುಗಳ ಇರುವಿಕೆಯನ್ನು ದೃಢಪಡಿಸಿದೆ. ಇದೀಗ ಕಾಡು ಪ್ರಾಣಿಗಳ ಹಾವಳಿ ಇಲ್ಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿ ಬಸವರಾಜ ಕೊಣ್ಣೂರ, ಕೊಲ್ಹಾರ ತಹಸೀಲ್ದಾರ್‌, ಎಸ್‌.ಎಸ್‌.ನಾಯಕಲಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಒಂದು ವೇಳೆ ಕಾಡು ಪ್ರಾಣಿಗಳ ಚಲನವಲನ ಕಂಡು ಬಂದಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜನರ ಬಳಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಪ್ರಾಣಿಗಳನ್ನು ಹಿಡಿಯಲು ಅಗತ್ಯ ಕ್ರಮಗಳನ್ನು ದಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್