ಎಚ್ ಡಿ ಕುಮಾರಸ್ವಾಮಿ 
ರಾಜ್ಯ

HDK ಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ SIT ಪತ್ರ!

2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ.

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಎಚ್ ಡಿ​ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.

2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣ ಸಂಬಂಧ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.

ಅಕ್ರಮ ಗಣಿಗಾರಿಕೆ ಕುರಿತು 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್​. ಸಂತೋಷ್​ ಹೆಗ್ಡೆ ಅವರು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ. ಎಚ್​ಡಿ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ 2023 ನವೆಂಬರ್ 21ರಂದು ರಾಜ್ಯಪಾಲ ತಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29ರಂದು ಎಸ್​ಐಟಿಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?