ದಸರಾ ಕಾರ್ಯಾಧ್ಯಕ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ ಅವರು ಆನೆಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಗಜಪಯಣಕ್ಕೆ ಚಾಲನೆ ನೀಡಿದರು. 
ರಾಜ್ಯ

ಮೈಸೂರು ದಸರಾ: 'ಗಜಪಯಣ' ಆರಂಭ, ಅರಮನೆಯತ್ತ ಹೆಜ್ಜೆ ಹಾಕಿದ ಒಂಬತ್ತು ಆನೆಗಳು

ದಸರಾ ಕಾರ್ಯಾಧ್ಯಕ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ ಅವರು ಆನೆಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಗಜಪಯಣಕ್ಕೆ ಚಾಲನೆ ನೀಡಿದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಆನೆಗಳನ್ನು ಸ್ವಾಗತಿಸುವ ಗಜಪಯಣಕ್ಕೆ ಬುಧವಾರ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಲಾಗಿದ್ದು, ಒಂಬತ್ತು ಆನೆಗಳು ಅರಮನೆ ನಗರಿಯತ್ತ ಹೆಜ್ಜೆ ಹಾಕಿದವು.

ಮೈಸೂರು ದಸರಾಕ್ಕೆ ಆಗಮಿಸುವ ಅಭಿಮನ್ಯು ನೇತೃತ್ವದ ಗಜ ಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತವನ್ನು ನೀಡಲಾಯಿತು.

ಪ್ರತಿ ವರ್ಷ ಗಜಪಯಣದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕುಮ್ಕಿ ಆನೆಗಳು ದಸರಾ ಉತ್ಸವದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ತರಬೇತಿಗಾಗಿ ಮೈಸೂರಿಗೆ ಹೋಗುತ್ತವೆ.

ಈ ವರ್ಷ ಮೊದಲ ಬ್ಯಾಚ್‌ನಲ್ಲಿ ಒಂಬತ್ತು ಆನೆಗಳು, ಅಭಿಮನ್ಯು, ಧನಂಜಯ, ಗೋಪಿ, ಭೀಮಾ, ರೋಹಿತ್, ಕಂಜನ್, ಹೊಸ ಆನೆ ಏಕಲವ್ಯ ಹಾಗೂ ಹೆಣ್ಣು ಆನೆಗಳಾದ ವರಲಕ್ಷ್ಮಿ ಮತ್ತು ಲಕ್ಷ್ಮಿಯನ್ನು ಇಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅರಣ್ಯ ಇಲಾಖೆ ಹಾಗೂ ದಸರಾ ಸಮಿತಿಯಿಂದ ಬರ ಮಾಡಿಕೊಳ್ಳಲಾಯಿತು.

ದಸರಾ ಕಾರ್ಯಾಧ್ಯಕ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ ಅವರು ಆನೆಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಗಜಪಯಣಕ್ಕೆ ಚಾಲನೆ ನೀಡಿದರು.

ಗಜಪಯಣ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯಲಿದ್ದು, ಜನಸಾಮಾನ್ಯರ ದಸರಾ ಆಗಲಿದೆ ಎಂದು ಸಚಿವರು ಹೇಳಿದರು.

ನಾಗರಹೊಳೆ ಅರಣ್ಯದಲ್ಲಿ ವಾಸಿಸುವ ಬುಡಕಟ್ಟು ಸಮುದಾಯದವರು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಂಸದ ಸುನೀಲ್ ಬೋಸ್, ಶಾಸಕರಾದ ಜಿ.ಡಿ.ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಖಾತರಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT