ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಕುಮಾರಸ್ವಾಮಿ ಬಂಧನ: ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು ಎಂದು ಖಾರವಾಗಿ ಪ್ರಶ್ನಿಸಿದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲ. ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರ ಮಾತುಗಳು ಹಿಟ್ ಅಂಡ್ ರನ್ ನಂತೆ ಇರುತ್ತವೆ. ಜೇಬಿನಲ್ಲಿ ಪೆನ್ ಡ್ರೈವ್ ಇದೆ ಎಂದರು. ಒಂದೂ ದಿನ ತೋರಿಸಲಿಲ್ಲ. ನೀವು (ಮಾಧ್ಯಮದವರು) ಕುಮಾರಸ್ವಾಮಿ ಹೇಳುವುದನ್ನು ಕೇಳುತ್ತಿದ್ದರಲ್ಲ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?