ರಾಜ್ಯ

ಟಿ ನರಸೀಪುರದ ಹೊಟೇಲ್ ವೊಂದರಲ್ಲಿ ಸ್ಫೋಟಕ ಪತ್ತೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೈಸೂರು: ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ಮಾನವ-ಪ್ರಾಣಿ ಸಂಘರ್ಷ: ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗಿರಬಹುದು ಎಂದು ಸಂದೇಹಪಡಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್​ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.

ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದು ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT