ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕುರಿತಂತೆ ಸಂಬಂಧಿಸಿದಂತೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದ್ದು ಸದ್ಯ ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.