ಜಯಶ್ರೀ-ಕಿರಣ್ 
ರಾಜ್ಯ

ಉಡುಪಿ: ಪತ್ನಿಯ ರೀಲ್ಸ್ ಹುಚ್ಚಾಟದಿಂದ ಬೇಸತ್ತು ಕತ್ತಿಯಿಂದ ಕೊಚ್ಚಿ ಕೊಂದ ಪತಿ!

ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಉಡುಪಿ: ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಕತ್ತಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಬೆಳಗ್ಗೆ ಜಯಶ್ರೀ ಅನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದಾನೆ.

ಸದ್ಯ ಕಿರಣ್ ಉಪಾಧ್ಯನನ್ನು ಕೋಟ ಪೊಲೀಸರು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸಾಮಾಜಿಕ ಜಾಲತಾಣ ಇನ್ಸ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಜಯಶ್ರೀ ಹೆಚ್ಚು ಸಮಯ ಕಳೆಯುತ್ತಿದ್ದಳು ಎನ್ನುವ ಕ್ಷುಲ್ಲಕ ಕಾರಣಕ್ಕೆ ಕಿರಣ್ ಕಸಿವಿಸಿಕೊಂಡಿದ್ದು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಲೀಕರೇ ವಿದೇಶಿಗರಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ; ಡ್ರಗ್ಸ್ ಮಾರಾಟಗಾರರಿರುವ ಕಟ್ಟಡ ಕೆಡವಲು ಸರ್ಕಾರ ಚಿಂತನೆ!

ಕಾಂಗ್ರೆಸ್ ವಿರುದ್ಧ ತರೂರ್ ಬಂಡಾಯ ಬಾವುಟ?; ರಾಹುಲ್ ಗಾಂಧಿ ನೇತೃತ್ವದ ಸಭೆಗೆ ಮತ್ತೆ ಗೈರು!

ಬಾಲ್ಯದಲ್ಲಿ ಉಚಿತ ಮತ್ತು ಕಡ್ಡಾಯ ಆರೈಕೆ, ಶಿಕ್ಷಣಕ್ಕಾಗಿ ಸಾಂವಿಧಾನಿಕ ತಿದ್ದುಪಡಿಗೆ ಸಂಸದೆ ಸುಧಾ ಮೂರ್ತಿ ಒತ್ತಾಯ

The fire never left': ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದ ವಿನೇಶ್ ಫೋಗಟ್!

ಕಾಶ್ಮೀರ 7,000 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ; ಮುಸ್ಲಿಮರ ವಿರುದ್ಧದ 'ಹೊಸ ದಾಳಿ': ಮೆಹಬೂಬಾ ಮುಫ್ತಿ

SCROLL FOR NEXT