ವಿದ್ಯಾರ್ಥಿನಿ 
ರಾಜ್ಯ

ಬೆಂಗಳೂರು: ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಆಕೆಯ ಎರಡೂ ಕಾಲುಗಳಲ್ಲಿ ಮೂಳೆ ಮುರಿತವಾಗಿದ್ದು, ಜಯನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆ ಅಪಾಯದಿಂದ ಪಾರಾಗಿದ್ದಾಳೆ.

ಬೆಂಗಳೂರು: ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ಬಾಪೂಜಿ ನಗರದಲ್ಲಿ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಅಲ್ ಫಹಾದ್ ಎಜುಕೇಶನ್ ಸೆಂಟರ್‌ನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

ಕೂಡಲೇ ವಿದ್ಯಾರ್ಥಿನಿಯನ್ನು ಶಾಲಾ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆಗೆ ಮತ್ತು ನಂತರ ಜಯನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರೆದೊಯ್ದಿದ್ದಾರೆ.ಜಿಗಿಯುವ ಮುನ್ನ ಆಕೆ ತನ್ನ ಕ್ಲಾಸ್ ಮೇಟ್ ಗೆ ಹೇಳಿದ್ದಳು ಎನ್ನಲಾಗಿದೆ. ಆಕೆಯ ಕಾಲು ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿವೆ.

ಸಿಬ್ಬಂದಿಯೊಬ್ಬರು ಇತರ ವಿದ್ಯಾರ್ಥಿಗಳ ಮುಂದೆ ಗದರಿಸಿದ್ದರಿಂದ ಆಕೆ ಅಸಮಾಧಾನಗೊಂಡಿದ್ದಳು ಎನ್ನಲಾಗಿದೆ. ಆಕೆಯ ಎರಡೂ ಕಾಲುಗಳಲ್ಲಿ ಮೂಳೆ ಮುರಿತವಾಗಿದ್ದು, ಜಯನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆ ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಿಬ್ಬಂದಿ ಮೇಲಿನ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿವೆ. ಶಾಲೆಯಲ್ಲಿ ಸಿಸಿಟಿವಿಗಳಿದ್ದು, ಯಾವುದೇ ಶಿಕ್ಷಕರು ನಿಂದಿಸಿದರೆ ರೆಕಾರ್ಡ್ ಆಗಿರುತ್ತದೆ. ಚಿಕಿತ್ಸಾ ವೆಚ್ಚವನ್ನು ಆಡಳಿತ ಮಂಡಳಿಯೇ ಭರಿಸಲಿದೆ ಎಂದು ಶಾಲೆಯ ಉಪಪ್ರಾಂಶುಪಾಲ ಮೊಹಮ್ಮದ್ ಫಹಾದ್ ಟಿಎನ್‌ಐಇಗೆ ತಿಳಿಸಿದ್ದಾರೆ.

ಶಾಲೆಯಲ್ಲಿ ನಡೆದ ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಊಟದ ವಿರಾಮದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT